AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್

ದೆಹಲಿಯಲ್ಲಿ ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಇದರ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್
ದರೋಡೆಯ ದೃಶ್ಯ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 27, 2021 | 6:07 PM

Share

ದೆಹಲಿ: ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಹಳ ದೂರ ಹಿಂಬಾಲಿಸಿದ ಇಬ್ಬರು ಅಪರಿಚಿತರು ಆ ವ್ಯಕ್ತಿಯ ಕುತ್ತಿಗೆಯನ್ನು ಹಿಡಿದು, ಆತನ ಕೈಲಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿದ್ದಾರೆ.

ಈ ಕುರಿತು ಕೇಸ್ ದಾಖಲಿಸಲಾಗಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಅವರು ತಮ್ಮ ಮನೆ ತಲುಪುವ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಇಬ್ಬರ ರಾಮ್ ಅವರ ಕುತ್ತಿಗೆಯನ್ನು ಹಿಡಿದು, ಅವರ ಕೈಲಿದ್ದ ಬ್ಯಾಗ್ ಕಸಿದುಕೊಂಡು ಓಡಿಹೋಗಿದ್ದಾರೆ.

ದರೋಡೆಕೋರರ ಕೈಯಿಂದ ಬಿಡಿಸಿಕೊಳ್ಳಲು ರಾಮ್ ಅವರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಅವರನ್ನು ಕೆಳಗೆ ತಳ್ಳಿದ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಪೊಲೀಸ್ ಚೆಕ್​ಪೋಸ್ಟ್​ನಿಂದ ಕೇವಲ 200 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಯೂನಿಫಾರ್ಮ್ ಎಲ್ಲಿ ಎಂದ ಪ್ರಿನ್ಸಿಪಾಲ್ ತಲೆಗೆ ಗನ್ ಹಿಡಿದ ವಿದ್ಯಾರ್ಥಿ!

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Viral Video Senior citizen robbed in Northwest Delhi CCTV Video Viral)

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ