ನೂರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಕನ್ನ

ನೂರಾರು ವರ್ಷಗಳ ಇತಿಹಾಸ ಇರುವ ಆಂಜನೇಯ ಮತ್ತು ಆದಿ ನಾರಾಯಣ ದೇವಸ್ಥಾನಕ್ಕೆ ಕನ್ನ ಹಾಕಿದ್ದಾರೆ. ದೇವಸ್ಥಾನದ ಬೀಗ ಮುರಿದು ಹುಂಡಿ ಹೊತ್ಯೋದಿದ್ದಾರೆ. ಕಾಟನ್ ಪೇಟೆಯ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದೆ.

ನೂರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಕನ್ನ
ಸಾಂದರ್ಭಿಕ ಚಿತ್ರ
TV9kannada Web Team

| Edited By: ಅಕ್ಷಯ್​ ಕುಮಾರ್​​

Aug 04, 2022 | 5:37 PM

ಕಾಟನ್ ಪೇಟೆ: ನಗರದಲ್ಲಿ ನೂರಾರು ವರ್ಷಗಳ ಇತಿಹಾಸ ಇರುವ ಆಂಜನೇಯ ಮತ್ತು ಆದಿ ನಾರಾಯಣ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ದೇವಸ್ಥಾನದ ಬೀಗ ಮುರಿದು ಹುಂಡಿ ಹೊತ್ಯೋದಿದ್ದಾರೆ. ಕಾಟನ್ ಪೇಟೆಯ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದೆ. ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಿಗ್ಗೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಬೈಕ್ ಹಾಗೂ ಆಟೋ ಡಿಕ್ಕಿ, ಬೈಕ್ ಸವಾರ ಸಾವು

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದಲ್ಲಿ ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿದ್ದಾನೆ. ಉತ್ತನೂರು ಗ್ರಾಮದ ಅರುಣ್ ಕುಮಾರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೌಲ್ಟ್ರಿ ಫಾರಂಗೆ ನೀರು ನುಗ್ಗಿ 2 ಸಾವಿರ ಕೋಳಿಗಳು ಸಾವು

ಇದನ್ನೂ ಓದಿ

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಜಿಟಿ ಜಿಟಿ ಮಳೆ ಹಿನ್ನೆಲೆ ಪೌಲ್ಟ್ರಿ ಫಾರಂಗೆ ನೀರು ನುಗ್ಗಿ 2 ಸಾವಿರ ಕೋಳಿಗಳು ಸಾವನ್ನಪಿದೆ. ಕಾಲುವೆಯ ನೀರು ಪೌಲ್ಟ್ರಿ ಫಾರಂಗೆ ನುಗ್ಗಿದೆ, ಪೌಲ್ಟ್ರಿ ಫಾರಂ ಒಳಗೆ ಇದ್ದ 2 ಸಾವಿರ ಕೋಳಿಗಳು ನೀರಿನಲ್ಲಿ ಮುಲುಗಿ ಸತ್ತಿದೆ. ಟಿ.ನರಸೀಪುರ ತಾಲೂಕಿನ ಮಾರಗೌಡನಹಳ್ಳಿ ಗ್ರಾಮದ ಸಿದ್ದೇಗೌಡ ಎಂಬುವರಿಗೆ ಸೇರಿದ ಪೌಲ್ಟ್ರಿ ಫಾರಂನಲ್ಲಿ ಈ ಘಟನೆ ನಡೆದಿದೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada