Kolkata Crime News: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಪೊದೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕೊಲ್ಕತ್ತಾದಲ್ಲಿ ಇತ್ತೀಚೆಗೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ನಂತರ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆಯೇ ಈ ಘಟನೆ ಸಂಭವಿಸಿದೆ.

Kolkata Crime News: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಪೊದೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಶವ
Follow us
ಸುಷ್ಮಾ ಚಕ್ರೆ
|

Updated on: Aug 21, 2024 | 6:28 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಗ್ರಾಮದ ರಸ್ತೆ ಬದಿಯ ಪೊದೆಯಲ್ಲಿ ಇಂದು ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಆ ಶವದ ಮೇಲೆ ಹಲವಾರು ಗಾಯಗಳಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ ಹೊಸ ಘಟನೆ ನಡೆದಿದೆ.

ಸ್ಥಳೀಯರು ಮೊದಲು ಶವವನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಮಹಿಳೆಯ ಗುರುತು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Crime News: ನಿಲ್ಲದ ಲೈಂಗಿಕ ದೌರ್ಜನ್ಯ; ಉತ್ತರಾಖಂಡದಲ್ಲಿ ಬಸ್​ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ವರದಿಗಳ ಪ್ರಕಾರ, ಆನಂದಪುರದ ಪೊದೆಗಳ ಹಿಂದೆ ಅಪರಿಚಿತ ಮಹಿಳೆಯ ಶವವನ್ನು ಪತ್ತೆ ಮಾಡಿದ ಸ್ಥಳೀಯ ನಿವಾಸಿಗಳು ಆಕೆಯನ್ನು ಗುರುತಿಸಲು ಸಾಧ್ಯವಾಗದ ಕಾರಣ ಅವರು ಆ ಪ್ರದೇಶದವರಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಹತ್ಯೆಯ ನಂತರ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆನಂದಪುರದಲ್ಲಿ ಇತ್ತೀಚೆಗೆ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿರುವುದು ಆಡಳಿತದ ವಿರುದ್ಧ ಸಾರ್ವಜನಿಕರ ಅಸಮಾಧಾನವನ್ನು ಇನ್ನಷ್ಟು ಹೆಚ್ಚಿಸಬಹುದು.

ಇದನ್ನೂ ಓದಿ: Shocking News: ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

ಆಗಸ್ಟ್ 9ರಂದು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ನಂತರ, 31 ವರ್ಷದ ಮಹಿಳೆಯ ಅರೆಬೆತ್ತಲೆ ದೇಹವು ಕೊಲ್ಕತ್ತಾದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಪತ್ತೆಯಾಗಿತ್ತು. ಮರುದಿನ ಅಪರಾಧಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಓರ್ವ ಸಿಬ್ಬಂದಿಯನ್ನು ಬಂಧಿಸಲಾಯಿತು. ಇದರ ಬೆನ್ನಲ್ಲೇ ಕೊಲ್ಕತ್ತಾ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಕೊಲ್ಕತ್ತಾ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಆದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ