ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ ಕಳಿಸದಿದ್ದರೆ ಅಪ್ರಾಪ್ತೆಯರ ಹೆಸರಿನಲ್ಲಿ ನಕಲಿ ಅಕೌಂಟ್ […]

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 13, 2020 | 3:39 PM

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ.

ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ ಕಳಿಸದಿದ್ದರೆ ಅಪ್ರಾಪ್ತೆಯರ ಹೆಸರಿನಲ್ಲಿ ನಕಲಿ ಅಕೌಂಟ್ ತೆರೆದು I’m available ಎಂದು ಪೋಸ್ಟ್ ಹಾಕಿ ಫೋನ್ ನಂ‌ಬರ್ ಹಾಕ್ತಿದ್ದ. ಕೆಟ್ಟದಾಗಿ ಯುವತಿಯರನ್ನ ಬಿಂಬಿಸಿ, ಅದೇ ರೀತಿ ಫೋಟೋ ಕಳುಹಿಸುವಂತೆ ವಿವಿಧ ನಂಬರ್​ಗಳಿಗೆ ಮೆಸೇಜ್ ಮಾಡಿ ಕ್ವಾಟ್ಲೆ ಕೊಡ್ತಿದ್ದ.

ಇದೇ ರೀತಿ ವೈಟ್ ಫೀಲ್ಡ್​ನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಕಿರುಕುಳ ನೀಡ್ತಿದ್ದ. ಬೇಸತ್ತ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಅಲರ್ಟ್ ಆದ ಪೋಷಕರು ವೈಟ್ ಫೀಲ್ಡ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಇದೇ ಆರೋಪಿ ವಿರುದ್ಧ ಒಂದೇ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿ ಪತ್ತೆಗಾಗಿ ಪೊಲೀಸರು ವಿಶೇಷ ಟೀಂ ರೆಡಿ ಮಾಡಿ ಬಂಧಿಸಿದ್ದಾರೆ. ಜಗದೀಶ್​ನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು