AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ಜೀವನ ನಡೆಸಲು ಬಾಲ್ಯದಿಂದ ಕಳ್ಳತನ ಮಾಡಿಕೊಂಡು ಬಂದಿದ್ದ ಆರೋಪಿ ಮುಂದೆ ಗಾಂಜಾ ನಶೆಗಾಗಿ ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ಮೊಬೈಲ್​ ಕಳ್ಳತನ ಮಾಡಲು ಆರಂಭಿಸಿದನು. ಸದ್ಯ ಈ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.

ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ
ಆರೋಪಿ ಅಬ್ದುಲ್ ರಜಾಕ್
Jagadisha B
| Updated By: ವಿವೇಕ ಬಿರಾದಾರ|

Updated on: Jul 30, 2024 | 2:53 PM

Share

ಬೆಂಗಳೂರು, ಜುಲೈ 30: ಗಾಂಜಾ ಕೊಂಡುಕೊಳ್ಳಲು ಮೊಬೈಲ್​ (Mobile) ಕದಿಯುತ್ತಿದ್ದ ಆರೋಪಿಯನ್ನು ವೈಟ್​ಫೀಲ್ಡ್ ಪೊಲೀಸರು (Whitefield Police) ಬಂಧಿಸಿದ್ದಾರೆ. ಬಿಹಾರ ಮೂಲದ ಅಬ್ದುಲ್ ರಜಾಕ್ (22) ಬಂಧಿತ ಆರೋಪಿ. ಬಂಧಿತ ಆರೋಪಿ ಅಬ್ದುಲ್ ರಜಾಕ್​​ನಿಂದ 32 ಮೊಬೈಲ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಬ್ದುಲ್ ರಜಾಕ್ ಬೆಂಗಳೂರಿನ ಕಾಡುಗೋಡಿಯಲ್ಲಿ ವಾಸವಾಗಿದ್ದನು. ಅಬ್ದುಲ್ ರಜಾಕ್ (Abdul Razak) ಚಿಕ್ಕವಯಸ್ಸಿನಿಂದಲೇ ಕಳ್ಳತನಕ್ಕೆ ಇಳಿದಿದ್ದನು.

ಕಳೆದ ಎರಡು ವರ್ಷಗಳಿಂದ ನಗರದ ಪಿಜಿ, ಕಾರು ಪಾರ್ಕಿಂಗ್​, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದನು. ಕದ್ದ ಮೊಬೈಲ್​ಗಳನ್ನು ಬಡವರಿಗೆ 2 ರಿಂದ 3 ಸಾವಿರ ರೂ.ಗೆ ಮಾರುತ್ತಿದ್ದನು. ಬಂದ ಹಣದಲ್ಲಿ ಗಾಂಜಾ ಖರೀದಿ ಮಾಡುತ್ತಿದ್ದನು. ಈತನ ಕೃತ್ಯದ ಬಗ್ಗೆ ವೈಟ್​ಫೀಲ್ಡ್ ಪೊಲೀಸ ಖಚಿತ ಮಾಹಿತಿ ಪಡೆದುಕೊಂಡಿದ್ದರು. ಮಾಹಿತಿ ಮೇರೆಗೆ ಪೊಲೀಸರು ಆರೋಪಿ ಅಬ್ದುಲ್ ರಜಾಕ್ ನಿವಾಸದ ಮೇಲೆ ದಾಳಿ ಮಾಡಿ ಬಂಧಿಸಿದ್ದಾರೆ.

ಹಾಸನದಿಂದ ಬಂದು ಬೆಂಗಳೂರಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿ

ಮತ್ತೊಂದು ಪ್ರಕರಣದಲ್ಲಿ ಮನೆ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶೋಯೆಬ್ ಪಾಷಾ ಅಲಿಯಾಸ್ ತುರುಕಾ ಬಾಬು‌ ಬಂಧಿತ ಆರೋಪಿ. ಆರೋಪಿ ಶೋಯೆಬ್ ಪಾಷಾ ಐದು ಮನೆಗಳಲ್ಲಿ ದರೋಡೆ ಮಾಡಿದ್ದಾನೆ. ಬಂಧಿತನಿಂದ 101 ಗ್ರಾಂ ತೂಕದ ಚಿನ್ನಾಭರಣ, ಒಂದು ಬೈಕ್, ಎರಡು ಲ್ಯಾಪ್ ಟಾಪ್​ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ ಅರೆಸ್ಟ್, ಸಹೋದರ, ಪ್ರಿಯತಮನಿಗಾಗಿ ಹುಡುಕಾಟ

ಆರೋಪಿ ಶೋಯೆಬ್ ಪಾಷಾ ಹಾಸನದಿಂದ ತುಮಕೂರುವರೆಗೆ ರೈಲಿನಲ್ಲಿ ಬರುತ್ತಿದ್ದನು. ತುಮಕೂರು ರೈಲು ನಿಲ್ದಾಣದಲ್ಲಿ ಟಿವಿಎಸ್ ಅಪಾಚೆ ಬೈಕ್ ಹತ್ತಿ ನೆಲಮಂಗಲಕ್ಕೆ ಬರುತ್ತಿದ್ದನು. ಲಾಡ್ಜ್​ವೊಂದರಲ್ಲಿ ರೂಮ್ ಮಾಡಿಕೊಂಡು ಇರುತ್ತಿದ್ದನು. ಬಳಿಕ ಎರಡು ದಿನ ಬೀಗ ಹಾಕಿದ ಮನೆಗಳಿಗಾಗಿ ಹುಡುಕಾಟ ನಡೆಸುತ್ತಿದ್ದನು. ತಾನು ಟಾರ್ಗೆಟ್​ ಮಾಡಿದ್ದ ಮನೆಗಳಿಗೆ ರಾತ್ರಿ ವೇಳೆ ತೆರಳಿ, ಬೀಗ ಒಡೆದು ಒಳ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದನು.

ನಂತರ ಲಾಡ್ಜ್​​ಗೆ ವಾಪಸ್​ ಆಗಿ, ಒಂದು ದಿನ ಅಲ್ಲೇ ಉಳಿದುಕೊಳ್ಳುತ್ತಿದ್ದನು. ಬಳಿಕ ಬೈಕ್​ನಲ್ಲಿ ತುಮಕೂರಿಗೆ ಹೋಗುತ್ತಿದ್ದನು. ತುಮಕೂರು ರೈಲು ನಿಲ್ದಾಣದಲ್ಲಿ ಬೈಕ್​ ಪಾರ್ಕ್​ ಮಾಡಿ ರೈಲು ಹತ್ತಿ ಹಾಸನಕ್ಕೆ ಹೋಗುತ್ತಿದ್ದನು. ಪ್ರತಿಬಾರಿ ಕಳ್ಳತನಕ್ಕೆ ಇಳಿದಾಗ ಇದೇ ರೀತಿ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!