ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅನ್ಯ ಯುವತಿಯೊಂದಿಗೆ ಪತಿಯ ಪಾರ್ಟಿ ಸೆಲೆಬ್ರೇಷನ್.. ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jan 06, 2021 | 5:53 PM

ಬೆಂಗಳೂರು: ಕೈ ಹಿಡಿದ ಪತ್ನಿಯಿದ್ದರೂ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಲಾಷ ತ್ರಿವೇಣಿ (30) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಅಭಿಲಾಷ ತ್ರಿವೇಣಿ ಮತ್ತು ಶಶಿಕುಮಾರ್ ಇಬ್ಬರದ್ದೂ ಇದು ಎರಡನೇ ಮದುವೆ. ಇಬ್ಬರಿಗೂ ಈ ಹಿಂದೆ ಪ್ರತ್ಯೇಕ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದರು. ಎರಡು ವರ್ಷದ ಹಿಂದೆ ಪರಸ್ಪರ ಪರಿಚಯವಾಗಿ ಪ್ರೀತಿಸಿ ವಿವಾಹವಾಗಿದ್ರು. ಆದರೆ ಇವರ ಜೀವನದಲ್ಲಿ ಅನುಮಾನ ಎಂಬ ಭೂತದ ಛಾಯೆ ಹೆಚ್ಚಿತ್ತು.

ಪತಿ ಶಶಿಕುಮಾರ್ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬಹುತೇಕ ಬಾರಿ ನೈಟ್ ಶಿಫ್ಟ್ ನೆಪ ಹೇಳಿ ಗೆಳತಿ ಮನೆಗೆ ಹೋಗುತ್ತಿದ್ದ. ಹಾಗೂ ಒಮ್ಮೆ ರಾತ್ರಿ 10 ಗಂಟೆಯ ಸಮಯದಲ್ಲಿ ಶಶಿಕುಮಾರ್, ಮಹಿಳೆಯ ಜೊತೆ ವಿಡಿಯೋ ಕಾಲ್​ನಲ್ಲಿದ್ದದನ್ನು ತ್ರಿವೇಣಿ ನೋಡಿ ಅಂದು ಮನೆಯಲ್ಲಿ ದೊಡ್ಡ ರಂಪವೇ ಆಗಿತ್ತು.

ಇದೇ ರೀತಿ ಹೊಸ ವರ್ಷದ ದಿನವೂ ರಾತ್ರಿ ಶಶಿಕುಮಾರ್​ಗೆ ಕರೆ ಬಂದಿರುತ್ತೆ. ಆಗ ಆತ ನನಗೆ ಕೆಲಸ ಇದೆ ಎಂದು ಮನೆಯಿಂದ ಎದ್ದು ಹೋಗಿದ್ದ. ಅನುಮಾನಗೊಂಡ ತ್ರಿವೇಣಿ ತನ್ನ ಪತಿಯನ್ನೇ ಹಿಂಬಾಲಿಸುತ್ತಾಳೆ. ಬಳಿಕ ಅನ್ಯ ಯುವತಿಯೊಂದಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಭಾಗಿಯಾಗಿರುವುದನ್ನು ನೋಡಿದ್ದಾಳೆ.

ಪತಿ ಶಶಿಕುಮಾರ್ ಅನೈತಿಕ ಸಂಬಂಧದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತ್ರಿವೇಣಿ ಕುಟುಂಬಸ್ಥರ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿರುವ ಶ್ರೀರಾಂಪುರ ಪೊಲೀಸರು ಪತಿ ಶಶಿಕುಮಾರ್​ನನ್ನು ಬಂಧಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಪತ್ನಿಗೆ ವರದಕ್ಷಿಣೆ ಕಿರುಕುಳ.. 3ನೆ ಮಹಡಿಯಿಂದ ನೂಕಿ ಕೊಲೆಗೈದೇಬಿಟ್ಟ ಪಾಪಿ ಪತಿ

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್