ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಶಂಕೆ; ವ್ಯಕ್ತಿಯ ಸಾವಿಗೆ ಕೌಟುಂಬಿಕ ಕಲಹ ಕಾರಣ ?

ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದಲ್ಲಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಶಂಕೆ; ವ್ಯಕ್ತಿಯ ಸಾವಿಗೆ ಕೌಟುಂಬಿಕ ಕಲಹ ಕಾರಣ ?
ಸಾಂಧರ್ಬಿಕ ಚಿತ್ರ
TV9kannada Web Team

| Edited By: Vivek Biradar

Jul 16, 2022 | 8:00 PM

ಬೆಂಗಳೂರು: ಬೆಂಗಳೂರು (Bengaluru) ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಭೋವಿಪಾಳ್ಯದಲ್ಲಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಭಿನಂದನ್‌(41) ಕೊಲೆಯಾದ ದುರ್ದೈವಿ. ಕೌಟುಂಬಿಕ ಕಲಹದಿಂದ ಪತ್ನಿ ಅನಿತಾಳೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಅನಿತಾ, ಪತಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ.

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ದಂಪತಿ ಬಂಧನ

ದಕ್ಷಿಣ ಕನ್ನಡ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಕಾವೂರಿನ ದಂಪತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ. ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ (28), ಪತ್ನಿ ಅಂಜನಾ (21) ಬಂಧಿತ ಆರೋಪಿಗಳು. ಆರೋಪಿಗಳಿಂದ 2 ಕೆಜಿ 200 ಗ್ರಾಂ ಗಾಂಜಾ, 1500 ನಗದು, 1 ಮೊಬೈಲ್​​ ಮತ್ತು ಡಿಜಿಟಲ್ ತೂಕ ಮಾಪನವನ್ನು ಪೊಲೀಸ್​​ರು​ ವಶಪಡಿಸಿಕೊಂಡಿದ್ದಾರೆ. ಮಂಗಳೂರಿನ ಸಿಇಎನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರೈತರ ಸಾವು

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಸವದತ್ತಿ ತಾಲೂಕಿನ ಹಿರೂರು ಬಳಿ  ನಡೆದಿದೆ. ಫಕೀರಪ್ಪ ಚಂದರಗಿ(54), ಮಹದೇವ ಮೇತ್ರಿ(40) ಮೃತ ರೈತರು. ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೀನು ಹಿಡಿಯಲು ತೆರಳಿದ್ದ ವೇಳೆ ತೆಪ್ಪ ಮಗುಚಿ ಇಬ್ಬರ ಸಾವು

ಹಾಸನ: ಹಾಸನ ತಾಲೂಕಿನ ತಿಪ್ಲಾಪುರ ಗ್ರಾಮದ ಬಳಿ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ತೆಪ್ಪ ಮಗುಚಿ ಇಬ್ಬರು ಸಾವನ್ನಪ್ಪಿದ್ದಾರೆ. ಕಿಶೋರ್(38), ಸ್ನೇಹಿತ ರಾಜಣ್ಣ(50)  ಮೃತ ದುರ್ದೈವಿಗಳು. ಕೆರೆಯ ಮಧ್ಯಭಾಗದಲ್ಲಿ ತೆಪ್ಪ ಮಗುಚಿ ಇಬ್ಬರ ಸಾವನ್ನಪ್ಪಿದ್ದು, ಓರ್ವ ಪಾರಾಗಿದ್ದಾರೆ. ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಕಾರ್ಯಾಚರಣೆ ನಡೆಸಿ ಕಿಶೋರ್ ಮೃತದೇಹ ಹೊರತೆಗೆದಿದ್ದಾರೆ. ಮತ್ತೊಂದು ಮೃತದೇಹಕ್ಕಾಗಿ ಶೋಧ ಮುಂದುವರೆದಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada