ಬೆಂಗಳೂರು; ಪ್ರಿಯಕರನ ಜೊತೆ ಸೇರಿ ಗುಂಡು ಕಲ್ಲು ಎತ್ತಿ ಹಾಕಿ ಪತಿಯನ್ನೇ ಕೊಂದ ಪ್ರೇಮಿಗಳು ಅರೆಸ್ಟ್
ಪ್ರಿಯತಮೆಯನ್ನು ಭೇಟಿ ಮಾಡಲು ಆಂಧ್ರದಿಂದ ಹೆಚ್ಎಸ್ಆರ್ ಲೇಔಟ್ಗೆ ಬಂದಿದ್ದ ಪ್ರಿಯಕರನ ಕಳ್ಳಾಟ ಕಂಡು ಜಗಳ. ಗಲಾಟೆ ವೇಳೆ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದು ಹೃದಯಾಘಾತವೆಂದು ಬಿಂಬಿಸಲು ಹೋಗಿ ಸಿಕ್ಕಿಬಿದಿದ್ದಾಳೆ. ಮೃತದೇಹ ಮರಣೋತ್ತರ ಪರೀಕ್ಷೆ ವೇಳೆ ಕೊಲೆ ಎಂದು ಸಾಭೀತಾಗಿದ್ದು ಸತ್ಯ ಬಯಲಾಗಿದೆ. ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.
ಬೆಂಗಳೂರು, ಜ.13: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪ್ರೇಮಿಗಳನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು (HSR Layout Police) ಬಂಧಿಸಿದ್ದಾರೆ. ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ (Murder). ಇದೇ ತಿಂಗಳ 09ರಂದು ಹೆಚ್ಎಸ್ಆರ್ ಲೇಔಟ್ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು. ಸದ್ಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ನಂದಿನಿ ಬಾಯಿ ಜನವರಿ 09 ರಂದು ಪ್ರಿಯಕರ ನಿತೇಶ್ನನ್ನು ಹೆಚ್ಎಸ್ಆರ್ ಲೇಔಟ್ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ಧಿಡೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು ಕಂಡು ಕೋಪಗೊಂಡಿದ್ದ. ಬಳಿಕ ಪತಿ-ಪತ್ನಿ ನಡುವೆ ಗಲಾಟೆಯಾಗಿದ್ದು ಜಗಳ ತಾರಕ್ಕಕ್ಕೇರಿ ಕೊಲೆ ನಡೆದಿದೆ. ನಂದಿನಿ ಹಾಗೂ ಆಕೆಯ ಪ್ರಿಯಕರ ಇಬ್ಬರು ಸೇರಿ ವೆಂಕಟನಾಯಕ್ನ ತಲೆ ಮೇಲೆ ರುಬ್ಬುವ ಗುಂಡು ಎತ್ತಾಕಿ ಕೊಲೆ ಮಾಡಿದ್ದಾರೆ.
ಕೊಲೆ ಮಾಡಿ ಹೃದಯಾಘಾತವೆಂದು ಬಿಂಬಿಸಲು ಯತ್ನ
ಇನ್ನು ಪತಿಯನ್ನು ಕೊಂದ ಬಳಿಕ ಮೃತದೇಹವನ್ನು ಮನೆಯ ಹೊರಗೆ ಶೌಚಾಲಯದ ಬಳಿ ಇಟ್ಟು ಹೃದಯಾಘಾತವೆಂದು ಬಿಂಬಿಸಲು ಯತ್ನಿಸಿದ್ದಾರೆ. ಚೂಪಾದ ಕಲ್ಲು ಇಟ್ಟು ಕಲ್ಲಿನ ಮೇಲೆ ಬಿದ್ದಿದ್ದಾನೆ ಎಂದು ಸೀನ್ ಕ್ರೀಯೆಟ್ ಮಾಡಿದ್ದಾರೆ. ನಂತರ ಬೆಳಗ್ಗೆ ಗಂಡ ಸಾವನ್ನಪ್ಪಿದ್ದಾನೆ ಎಂದು ನಂದಿನಿ ಪೊಲೀಸರಿಗೆ ಕರೆ ಮಾಡಿದ್ದಾಳೆ. ಸ್ಥಳಕ್ಕೆ ಬಂದ ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರ ಜೊತೆ ಮದುವೆಯಾದಳೆಂದು ಮನನೊಂದ ಯುವಕ ಆತ್ಮಹತ್ಯೆ
ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿದಾಗ ಕೊಲೆ ಎಂಬುದು ಬಯಲಾಗಿದೆ. ಪೊಲೀಸರಿಗೂ ಸ್ಥಳ ಪರಿಶೀಲನೆ ವೇಳೆ ಕೊಲೆ ಎಂಬುದಾಗಿ ಅನುಮಾನ ಬಂದಿತ್ತು. ಪೊಲೀಸರಿಗೆ ನಂದಿನಿ ಮೇಲೆ ಅನುಮಾನ ವ್ಯಕ್ತವಾಗಿ ನಿಗಾ ಇಟ್ಟಿದ್ರು. ಮರಣೋತ್ತರ ವರದಿ ಬಂದ ಬಳಿಕ ನಂದಿನಿಯನ್ನ ವಿಚಾರಿಸಿದಾಗ ನನ್ನ ಗಂಡನನ್ನು ಕಳೆದಕೊಂಡಿದ್ದೀನಿ ಅಂತ ನಾಟಕವಾಡಿದ್ದಳು. ಪೊಲೀಸರು ತಮ್ಮ ಸ್ಟೈಲ್ ನಲ್ಲಿ ವಿಚಾರಣೆ ನಡೆಸಿದಾಗ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.
ಬಾಲ್ಯದ ಸ್ನೇಹ ಪ್ರೀತಿಯಾಗಿ ಕೊಲೆಗೆ ಕಾರಣವಾಯ್ತು
ನಿತೀಶ್ ಹಾಗೂ ನಂದಿನಿ ಇಬ್ಬರೂ ಆಂಧ್ರ ಪ್ರದೇಶ ಸತ್ಯ ಸಾಯಿ ತಾಲ್ಲೂಕಿನವರು. ಬಾಲ್ಯದಿಂದ ಸ್ನೇಹಿತರಾಗಿದ್ದವರು ಬಳಿಕ ಇಬ್ಬರು ಪ್ರೀಮಿಗಳಾದರು. ಗಂಡ ವೆಂಕಟನಾಯಕ್ ಮನೆಯಲ್ಲಿ ಇಲ್ಲದಿರುವಾಗ ನಂದಿನಿ ತನ್ನ ಪ್ರಿಯತಮನನ್ನು ಕರೆಸಿಕೊಳ್ಳುತ್ತಿದ್ದಳು. ನಿತೀಶ್ ತನ್ನ ಪ್ರೇಯಸಿಗಾಗಿ ಆಂಧ್ರದಿಂದ ಹೆಚ್ಎಸ್ಆರ್ ಲೇಔಟ್ ಮನೆಗೆ ಬಂದು ಹೋಗುತ್ತಿದ್ದ. ಸದ್ಯ ಇಬ್ಬರನ್ನೂ ಬಂಧಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:10 am, Sat, 13 January 24