ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ, ಪ್ರಿಯಕರನ ಮೂಲಕ ಹತ್ಯೆ ಮಾಡಿಸಿದ ಪತ್ನಿ

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರನ ಮೂಲಕ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಬೇವೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಲ್ಲಪ್ಪ ಹೊದ್ಲೂರ ಜೊತೆ ಯಲ್ಲವ್ವ ವಡ್ಡರ್ ಆಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಬೈದು ಮಂಜಪ್ಪ ವಡ್ಡರ್(35) ಬುದ್ಧಿವಾದ ಹೇಳಿದ್ದ. ಮದ್ಯದ ಅಮಲಿನಲ್ಲಿದ್ದ ಮಲ್ಲಪ್ಪ ಹೊದ್ಲೂರ ತಡರಾತ್ರಿ ಮಂಜಪ್ಪ ವಡ್ಡರ್​ನನ್ನು ಮನೆಯಲ್ಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ […]

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ, ಪ್ರಿಯಕರನ ಮೂಲಕ ಹತ್ಯೆ ಮಾಡಿಸಿದ ಪತ್ನಿ
ಸಾಧು ಶ್ರೀನಾಥ್​

Updated on: Dec 19, 2019 | 2:17 PM

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರನ ಮೂಲಕ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಬೇವೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಮಲ್ಲಪ್ಪ ಹೊದ್ಲೂರ ಜೊತೆ ಯಲ್ಲವ್ವ ವಡ್ಡರ್ ಆಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಬೈದು ಮಂಜಪ್ಪ ವಡ್ಡರ್(35) ಬುದ್ಧಿವಾದ ಹೇಳಿದ್ದ. ಮದ್ಯದ ಅಮಲಿನಲ್ಲಿದ್ದ ಮಲ್ಲಪ್ಪ ಹೊದ್ಲೂರ ತಡರಾತ್ರಿ ಮಂಜಪ್ಪ ವಡ್ಡರ್​ನನ್ನು ಮನೆಯಲ್ಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮೃತನ ಪತ್ನಿ ಯಲ್ಲವ್ವ ವಡ್ಡರ್ ಮತ್ತು ಮಲ್ಲಪ್ಪರನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 2:15 pm, Thu, 19 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us