ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ; ಕಾರಣವೇನು ಗೊತ್ತಾ?

ಇತ್ತೀಚೆಗೆ ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಗಲಾಟೆಗಳು ನಡೆದು, ಇದು ಅತೀರೆಕಕ್ಕೆ ಹೋಗಿ ಕೊಲೆಗಳು ನಡೆಯುತ್ತಿದೆ. ಅದರಂತೆ ಇದೀಗ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ. ಗ್ರಾಮದಲ್ಲಿ ಗುಂಡು ಹಾರಿಸಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಧಾರುಣ ಘಟನೆ ನಡೆದಿದೆ.

ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ; ಕಾರಣವೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 14, 2023 | 2:58 PM

ಕಲಬುರಗಿ, ಸೆ.14: ಗುಂಡು ಹಾರಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಕಲಬುರಗಿ(Kalaburgai) ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ. ಗ್ರಾಮದಲ್ಲಿ ನಡೆದಿದೆ. ಹನುಮವ್ವ(36) ಮೃತ ರ್ದುದೈವಿ. ಮದುವೆ ಆದಾಗಿನಿಂದ ಗಂಡ, ಹೆಂಡತಿ ನಡುವೆ ಜಗಳ ಆಗುತ್ತಿದ್ದು. ಪತಿಯ ಕಿರುಕಳಕ್ಕೆ ಬೇಸತ್ತಿದ್ದ ಹನುಮವ್ವ ತವರು ಮನೆಯಲ್ಲಿದ್ದಳು. ಇಂದು(ಸೆ.14) ಪತಿ ಬಸವರಾಜ್​ಗೆ ಏನಾಯಿತೊ ತವರು ಮನೆಯಲ್ಲಿದ್ದ ಪತ್ನಿಗೆ ಗುಂಡಿಟ್ಟು ಹತ್ಯೆಗೈದಿದ್ದಾನೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೊಲೆರೊ, ಬೈಕ್ ನಡುವೆ ಡಿಕ್ಕಿ; ಸವಾರ ಸಾವು

ನೆಲಮಂಗಲ: ಬೊಲೆರೊ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸಾವರ ಸಾವನ್ನಪ್ಪಿದ ಘಟನೆ ನೆಲಮಂಗಲದ ಬಸವನಹಳ್ಳಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಿವಾಸಿ ಧನುಷ್ (25)ಮೃತ ಬೈಕ್ ಸವಾರ. ಅಪಘಾತದ ಬಳಿಕ ಬೊಲೆರೊ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು, ಬೈಕ್ ಸವಾರನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸತತ ಮೂರು ಗಂಟೆಗಳ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ರಾಯಚೂರು: ಜೈಲಿನಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯನ್ನು ಪೋಷಕರು ವಾಪಸ್​​ ಕರೆತಂದು ಪೊಲೀಸರಿಗೆ ಒಪ್ಪಿಸಿದರು!

ಪತ್ನಿಯ ಕಾಟಕ್ಕೆ ಸೂಸೈಡ್ ಮಾಡಿಕೊಂಡ ಇಂಜಿನಿಯರ್

ತುಮಕೂರು: ಪತ್ನಿಯ ಕಾಟಕ್ಕೆ ಇಂಜಿನಿಯರ್ ಸೂಸೈಡ್ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. ಮಂಜುನಾಥ್ (38) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಇತ ಬೆಂಗಳೂರಿನ ಬಿಎಂಆರ್​ಸಿಎಲ್​ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರೀಯಾಂಕಳನ್ನು ಮದುವೆಯಾಗಿ ಬೆಂಗಳೂರಿನಲ್ಲಿ ದಂಪತಿ ವಾಸವಿದ್ದರು. ಬಳಿಕ ಗಂಡ ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದೇ ಪದೇ ಪದೇ ಗಲಾಟೆ ಆಗುತ್ತಿದ್ದು, ಮದುವೆಯಾದ ಬಳಿಕ ಪತಿ ಮಂಜುನಾಥ್​ಗೆ ಪತ್ನಿ ಪ್ರಿಯಾಂಕಾ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ.

ನೀನು ಹಳ್ಳಿ ಗುಗ್ಗು ನಿನ್ನನ್ನ ಮದುವೆಯಾಗಲು ನನಗೆ ಇಷ್ಟ ಇರಲಿಲ್ಲ ಎಂದು ಪದೇ ಪದೇ ಕಿಚಾಯಿಸುತ್ತಿದ್ದ ಪ್ರೀಯಾಂಕಾ. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಗಲಾಟೆಯಾಗಿ. ಪತ್ನಿಯ ಕಿರುಕುಳಕ್ಕೆ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಯ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೇಸೆಜ್ ಕಳುಹಿಸಿರುವ ಮಂಜುನಾಥ್. ‘ನನಗೆ ಅವಳ ಜೊತೆ ಜೀವನ ಮಾಡೋಕೆ ಆಗ್ತಿಲ್ಲ. ಆ ಮನೆ ಹಾಳಿಯಿಂದ ನಾನು ಸಾಯುತ್ತಿದ್ದೇನೆ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮಂಜುನಾಥ್ ಆಡಿಯೋ ಮೇಸೆಜ್ ಮಾಡಿದ್ದಾರೆ. ಈ ಕುರಿತು ಪತ್ನಿ ಪ್ರೀಯಾಂಕ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!