ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ

ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಥಳಿಸಿರುವ ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ.

ಹೆಂಡತಿ ಕೆಲಸದ ಬಗ್ಗೆ ಅಸಮಾಧಾನ: ಪತ್ನಿ ಮೇಲೆ ಹಲ್ಲೆ ಮಾಡಿ ಚಿತ್ರೀಕರಿಸಿದ್ದ ಪತಿಯ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 20, 2022 | 9:58 AM

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿರುವ  ದೃಶ್ಯವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಈ ವಿಡಿಯೋ ವೈರಲ್ ಆಗಿದ್ದು ಆತನನ್ನು ಮಲಯಂಕಿಝು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.

ಪತ್ನಿ ತನ್ನ ಇಚ್ಛೆಗೆ ವಿರುದ್ಧವಾಗಿ ಕೆಲಸಕ್ಕೆ ಹೋಗಿದ್ದಾಳೆ ಎಂಬ ಕಾರಣಕ್ಕೆ ದಿಲೀಪ್ ಆಕೆ ದೈಹಿಕ ಹಿಂಸೆ ನೀಡಿದ್ದಾನೆ. ವೀಡಿಯೋದಲ್ಲಿ ದಿಲೀಪ್ ತನ್ನ ಪತ್ನಿಯನ್ನು ಅಮಾನುಷವಾಗಿ ಹೊಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಸಾಲ ತೀರಿಸಲು ಕೆಲಸಕ್ಕೆ ಹೋಗುತ್ತಿದ್ದೆ ಎಂದು ಆತನ ಪತ್ನಿ ಹೇಳಿದ್ದಾಳೆ. ಪತಿ ಹಿಂಸೆ ತಡೆಯಲಾಗದೇ ಕೊನೆಗೆ ಕೆಲಸ ಬಿಡಲು ಒಪ್ಪಿಕೊಂಡಿದ್ದಾಳೆ ಎಂದು ವರದಿ ಮಾಡಲಾಗಿದೆ.

ವಿಡಿಯೋದಲ್ಲಿ ಅವಳ ಮುಖದಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ವೀಡಿಯೊದ ಕೊನೆಯಲ್ಲಿ, ದಿಲೀಪ್ ತನ್ನ ಹೆಂಡತಿ ಮತ್ತೆ ಕೆಲಸಕ್ಕೆ ಹೋಗುವುದಿಲ್ಲ ಎಂದು ಹೇಳುತ್ತಾನೆ. ಈ ಘಟನೆಯ ನಂತರ ಅವರ ಪತ್ನಿ ಮಲಯಂಕಿಝು ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ದಿಲೀಪ್​ನನ್ನು ಬಂಧಿಸಲಾಗಿತ್ತು.

ಇದನ್ನು ಓದಿ:ಅನೈತಿಕ ಸಂಬಂಧ; ಪ್ರಿಯಕರನ ಕೊಂದು ಪತ್ನಿ ಮೇಲೆ ಹಲ್ಲೆ, ಗಂಡ ಜೈಲು ಪಾಲು

ಇದೀಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ವಿರುದ್ಧ ಸೆಕ್ಷನ್ 307 (ಕೊಲೆಯ ಯತ್ನ), 498 (ಎ) (ಹೆಣ್ಣಿನ ಪತಿ ಅಥವಾ ಪತಿ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ), 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸುವುದು ಅಥವಾ ಅಂದರೆ) ಮತ್ತು ಭಾರತೀಯ ದಂಡ ಸಂಹಿತೆಯ 294 (B) (ಯಾವುದೇ ಅಶ್ಲೀಲ ಹಾಡು, ಬಲ್ಲಾಡ್ ಅಥವಾ ಪದಗಳನ್ನು ಹಾಡುವುದು, ಪಠಿಸುವುದು ಅಥವಾ ಉಚ್ಚರಿಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಹತ್ತಿರ) ಕಾನೂನಿನ ಅಡಿಯಲ್ಲಿ ಬಂಧಿಸಿಲಾಗಿದೆ.

Published On - 9:57 am, Thu, 20 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ