AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಚಲಿಸುತ್ತಿದ್ದ ಕಾರಿನಲ್ಲೇ ತಾಯಿ-ಮಗಳ ಮೇಲೆ ಅತ್ಯಾಚಾರ..!

Uttarakhand Rape Case: 2012 ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ದೇಶದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಕಾನೂನನ್ನು ರೂಪಿಸಲಾಗಿದೆ.

Crime News: ಚಲಿಸುತ್ತಿದ್ದ ಕಾರಿನಲ್ಲೇ ತಾಯಿ-ಮಗಳ ಮೇಲೆ ಅತ್ಯಾಚಾರ..!
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on: Jun 27, 2022 | 5:09 PM

Share

ದೆಹಲಿಯಲ್ಲಿ ನಡೆದ ಭೀಕರ ಸಾಮೂಹಿಕ ಅತ್ಯಾಚಾರ (Rape Case) ಘಟನೆ ಮರೆಮಾಚುವ ಮುನ್ನವೇ ಇದೀಗ ಬೆಚ್ಚಿ ಬೀಳಿಸುವ ಮತ್ತೊಂದು ರೇಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ಆಘಾತಕಾರಿ ಘಟನೆ ನಡೆದಿರುವುದು ಉತ್ತರಾಖಂಡ್​ ರಾಜ್ಯದಲ್ಲಿ ಎಂಬುದಷ್ಟೇ ವ್ಯತ್ಯಾಸ. ಉತ್ತರಾಖಂಡದ ಹರಿದ್ವಾರದ ರೂರ್ಕಿಯಲ್ಲಿ (Uttarakhand Rape Case) ಈ ಹೇಯ ಕೃತ್ಯ ನಡೆದಿದ್ದು, ಕಾರಿನಲ್ಲಿ ಲಿಫ್ಟ್​ ನೀಡುವುದಾಗಿ ನಂಬಿಸಿ ಮಹಿಳೆ ಮತ್ತು ಆಕೆಯ 6 ವರ್ಷದ ಮಗಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಸಂತ್ರಸ್ತ ಮಹಿಳೆಯು ತನ್ನ ಆರು ವರ್ಷದ ಮಗಳೊಂದಿಗೆ ಮುಸ್ಲಿಂ ಧಾರ್ಮಿಕ ಸ್ಥಳವಾದ ಪಿರಾನ್ ಕಲಿಯಾರ್​ಗೆ ತೆರೆಳಿದ್ದರು. ಅಲ್ಲಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋನು ಎಂಬ ವ್ಯಕ್ತಿಯು ಕಾರಿನಲ್ಲಿ ಲಿಫ್ಟ್ ನೀಡುವುದಾಗಿ ತಿಳಿಸಿದ್ದಾನೆ. ಇದನ್ನು ನಂಬಿದ ಆಕೆಯು ಮಗಳೊಂದಿಗೆ ಕಾರು ಹತ್ತಿದ್ದಾಳೆ. ಆದರೆ ಆತ ತನ್ನ ಗೆಳೆಯರೊಂದಿಗೆ ಸೇರಿಕೊಂಡು ಕಾರಿನಲ್ಲೇ ಮಹಿಳೆ ಮತ್ತು 6 ವರ್ಷದ ಮಗಳ ಮೇಲೆ ಹೇಯ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಪ್ರಮೇಂದ್ರ ದೋವಲ್, ಕಾರಿನಲ್ಲಿ ಸೋನು ಜೊತೆ ಕೆಲವು ಸ್ನೇಹಿತರಿದ್ದರು. ಆದರೆ ರಾತ್ರಿ ನಡೆದುಕೊಂಡು ಹೋಗಬೇಕಿದ್ದ ಕಾರಣ ಮಹಿಳೆಯು ಆತನನ್ನು ನಂಬಿ ಕಾರು ಹತ್ತಿದ್ದಳು. ಇದನ್ನೇ ಬಳಸಿಕೊಂಡು ಸೋನು ಮತ್ತು ಆತನ ಸಹಚರರು ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ ಆಕೆಯ ಮಗಳನ್ನೂ ಸಹ ರೇಪ್ ಮಾಡಿದ್ದರು. ಇದಾದ ಬಳಿಕ ಇಬ್ಬರನ್ನೂ ರೂರ್ಕಿ ಪ್ರದೇಶದ ಕಾಲುವೆಯ ಬಳಿ ಎಸೆದು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

ಇದಾಗ್ಯೂ ಮಹಿಳೆಯು ಮಧ್ಯರಾತ್ರಿ ಪೊಲೀಸ್ ಠಾಣೆಗೆ ಬಂದು ನಡೆದ ಘಟನೆಯನ್ನು ವಿವರಿಸಿದ್ದಾರೆ. ಆದರೆ ಕಾರಿನಲ್ಲಿ ಎಷ್ಟು ಮಂದಿ ಇದ್ದರು ಎಂದು ಮಹಿಳೆಗೆ ನಿಖರವಾಗಿ ಹೇಳಲು ಸಾಧ್ಯವಾಗಿಲ್ಲ. ಇನ್ನು ಕಾರನ್ನು ಓಡಿಸುವ ವ್ಯಕ್ತಿಯ ಹೆಸರು ಸೋನು ಎಂದು ತಿಳಿಸಿದ್ದು, ಆತನನ್ನು ಗೊತ್ತಿದ್ದ ಕಾರಣ ಮಹಿಳೆಯು ಕಾರಿಗೆ ಹತ್ತಿರುವುದಾಗಿ ಹೇಳಿದ್ದಾಳೆ. ಇದೀಗ ಮಹಿಳೆ ಮತ್ತು ಮಗಳನ್ನು ರೂರ್ಕಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2012 ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಳಿಕ ದೇಶದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಕಾನೂನನ್ನು ರೂಪಿಸಲಾಗಿದೆ. ಆದರೆ ಕಳೆದ ಎರಡು ವರ್ಷಗಳ ಅಂಕಿ ಅಂಶಗಳನ್ನು ಮಾತ್ರ ತೆಗೆದುಕೊಂಡರೂ ದೇಶದಲ್ಲಿ 6,311 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದರಲ್ಲೂ 2021 ರಲ್ಲಿ ದೇಶದ ಅತ್ಯಾಚಾರ ಪ್ರಕರಣಗಳು 12% ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರವೇ ತಿಳಿಸಿದೆ. ಅಂದರೆ ದೇಶದಲ್ಲಿ ಹೇಯ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಆಘಾತಕಾರಿ ಬೆಳವಣಿಗೆ ಎನ್ನದೇ ವಿಧಿಯಿಲ್ಲ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ