ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನೊಂದಿಗೆ ಸೇರಿ ಜಾನಪದ ಕಲಾವಿದನಾಗಿದ್ದ ಗಂಡನನ್ನೇ ಕೊಂದ ಪತ್ನಿ

ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನೊಂದಿಗೆ ಸೇರಿ ಮಹಿಳೆ ಕಟ್ಟಿಕೊಂಡ ತನ್ನ ಗಂಡನನ್ನೇ ಕೊಂದಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನೊಂದಿಗೆ ಸೇರಿ ಜಾನಪದ ಕಲಾವಿದನಾಗಿದ್ದ ಗಂಡನನ್ನೇ ಕೊಂದ ಪತ್ನಿ
ಕೊಲೆಯಾದ ಕೃಷ್ಣಮೂರ್ತಿ
Follow us
ರಮೇಶ್ ಬಿ. ಜವಳಗೇರಾ
|

Updated on:May 30, 2023 | 10:27 AM

ಕೋಲಾರ: ಗಂಡ, ಹೆಂಡತಿ (Husband And Wife)ಸಂಬಂಧಕ್ಕೆ ಕೊನೆಯಿಲ್ಲ. ಕೆಲವೊಮ್ಮೆ ವೈಮನಸ್ಸು, ಸಂಬಂಧದಲ್ಲಿ ಘರ್ಷಣೆ ಇರುತ್ತದೆ. ಕೆಲವೊಮ್ಮೆ ಈ ಕೆಲವು ವಿಷಯಗಳು ತುಂಬಾ ದೊಡ್ಡದಾಗಿರುತ್ತವೆ, ಇದರಿಂದಾಗಿ ಸಂಬಂಧಗಳು ಮುರಿದುಹೋಗುವ ಸಾಧ್ಯತೆಗಳು ಇರುತ್ತವೆ. ಆದ್ರೆ, ಇಲ್ಲೋರ್ವ ಮಹಿಳೆ ಪ್ರೀತಿ ಪ್ರೇಮ ಎಂದು ಕಟ್ಟಿಕೊಂಡ ಗಂಡನನ್ನೇ ಹತ್ಯೆಗೈದಿದ್ದಾಳೆ. ಹೌದು.. ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನೊಂದಿಗೆ ಸೇರಿ ಮಹಿಳೆ ಕಟ್ಟಿಕೊಂಡ ತನ್ನ ಗಂಡನನ್ನೇ ಕೊಂದಿರುವ ಘಟನೆ ಸೋಮವಾರ ತಡರಾತ್ರಿ ಕೋಲಾರ(Kolar) ತಾಲ್ಲೂಕಿನ ಕನ್ನಘಟ್ಟ ಬಳಿ ನಡೆದಿದೆ. ಪ್ರಿಯಕರ ಶ್ರೀನಿವಾಸಪುರ ತಾಲ್ಲೂಕಿನ ಚೊಕ್ಕರೆಡ್ಡಪಲ್ಲಿ ಶ್ರೀಧರ್ ಮತ್ತು ಆತನ ಸ್ನೇಹಿತ ಶ್ರೀಧರ್ ಜೊತೆ ಸೇರಿಕೊಂಡು ಸೌಮ್ಯ ತನ್ನ ಪತಿ ಕೃಷ್ಣಮೂರ್ತಿಯನ್ನು ಮೇ 29ರ ತಡರಾತ್ರಿ ಕೊಲೆ ಮಾಡಿದ್ದಾಳೆ. ಜಾನಪದ ಕಲಾವಿದ ಕೃಷ್ಣಮೂರ್ತಿನನ್ನು ಪತ್ನಿ ಸೌಮ್ಯ ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಈ ಕೃತ್ಯ ಎಸಗಿದ್ದು, ಬಳಿಕ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆಂದು ಬಿಂಬಿಸಲು ಯತ್ನಿಸಿದ್ದಾಳೆ. ಸದ್ಯ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರು ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Bengaluru News| ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಜನಘಟ್ಟ ಕೃಷ್ಣಮೂರ್ತಿ ಜಾನಪದ ಕಲಾವಿರಾಗಿದ್ದು, ಅವರಿಗೆ ರಾಜ್ಯ ಯುವ ಪ್ರಶಸ್ತಿ ಸಹ ಸಿಕ್ಕಿದೆ. ಅಲ್ಲದೇ ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿದ್ದರು. ಅಲ್ಲದೇ ಮಾನವ ಹಕ್ಕುಗಳು ಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷರು ಸಹ ಆಗಿದ್ದರು.

ಪತ್ನಿಯನ್ನು ಬರ್ಬರ ಹತ್ಯೆಗೈದ ಪತಿ

ಚಿಕ್ಕಬಳ್ಳಾಫುರ: ಕೋಲಾರದಲ್ಲಿ ಪತ್ನಿಯೇ ತನ್ನ ಗಂಡನನ್ನು ಕೊಂದಿದ್ದರೆ, ಇತ್ತ ಚಿಕ್ಕಬಳ್ಳಾಪುರದಲ್ಲಿ ಗಂಡ ತನ್ನ ಪತ್ನಿಯನ್ನೇ ಕೊಂದಿರುವ ಘಟನೆ ನಡೆದಿದೆ. ಅನೈತಿಕ ಸಂಬಂಧ ಅನುಮಾನದಪಟ್ಟು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಚಿಕ್ಕಬಳ್ಳಾಫುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿಈ ಘಟನೆ ನಡೆದಿದೆ. ವಿನೋದಮ್ಮ ಕೊಲೆಯಾದ ಮಹಿಳೆ.

ಕೆ.ಎಸ್ ಸುರೇಶ ಎನ್ನುವಾತ ವಿನೋದಮ್ಮಳನ್ನ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಆಕೆಯ ಶೀಲ ಶಂಕಿಸಿ ಈ ಕೃತ್ಯ ಎಸಗಿದ್ದಾನೆ. ಸ್ಥಳಕ್ಕೆ ಬಟ್ಲಹಳ್ಳಿ ಠಾಣೆ ಪೊಲೀಸರು ಭೇಟಿ ತನಿಖೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಭರತನಗರ ತಾಂಡಾದಲ್ಲಿ ನಡೆದಿದೆ. ಲಕ್ಷ್ಮಣ್ ಚೌಹಾಣ್(50) ಕೊಲೆಯಾದ ವ್ಯಕ್ತಿ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮಹಾತ್ಮಾ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Published On - 10:19 am, Tue, 30 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ