AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಗುವನ್ನು ನದಿಗೆ ಎಸೆದು ಕೊಂದ ತಾಯಿ

ಇತ್ತೀಚೆಗಷ್ಟೆ ನವಜಾತ ಶಿಶುವನ್ನು ತಾಯಿ ಟಾಯ್ಲೆಟ್​ ಕಮೋಡ್​ನೊಳಗೆ ಹಾಕಿ ಫ್ಲಶ್​ ಮಾಡಿದ್ದ ಘಟನೆ ಆತಂಕ ಸೃಷ್ಟಿಸಿತ್ತು. ಅದರ ಬೆನ್ನಲ್ಲೇ ಜಾರ್ಖಂಡ್ ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆರೋಪಿ 30 ವರ್ಷದ ಮಹಿಳೆ ತನ್ನ ಮಗುವಿನೊಂದಿಗೆ ಸಮೀಪದ ನದಿಗೆ ಸ್ನಾನಕ್ಕೆ ತೆರಳಿದ್ದಳು. ಆಗ ಈ ಘಟನೆ ನಡೆದಿದೆ. ಹಸುಳೆಯನ್ನು ನದಿಗೆ ಎಸೆದಿದ್ದ ಮಹಿಳೆಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಹೆಣ್ಣು ಮಗುವನ್ನು ನದಿಗೆ ಎಸೆದು ಕೊಂದ ತಾಯಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 11, 2024 | 10:47 PM

Share

ನವದೆಹಲಿ: ಜಾರ್ಖಂಡ್​ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾಯಿಯೊಬ್ಬಳು ಒಂದು ವಾರದ ಹಿಂದೆ ಹುಟ್ಟಿದ್ದ ತನ್ನ ಮಗುವನ್ನು ನದಿಗೆ ಎಸೆದು ಕೊಂದಿದ್ದಾಳೆ. ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ತನ್ನ ಹೆಣ್ಣು ಮಗುವನ್ನು ನದಿಗೆ ಎಸೆದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ಕೃತ್ಯದಿಂದ ಶಿಶು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜದುಗೋರಾದ ದುರ್ಕು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ 30 ವರ್ಷದ ಮಹಿಳೆ ತನ್ನ ಮಗುವಿನೊಂದಿಗೆ ಸಮೀಪದ ನದಿಗೆ ಸ್ನಾನಕ್ಕೆ ತೆರಳಿದ್ದಳು. ಆಗ ಆಕೆ ಮಗುವನ್ನು ಬೇಕೆಂದೇ ನದಿಗೆ ಎಸೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಮುಸಾಬಾನಿ) ಸಂದೀಪ್ ಭಗತ್ ತಿಳಿಸಿದ್ದಾರೆ. ಮಗು ಎಲ್ಲಿ ಎಂದು ಕೇಳಿದಾಗ ಮನೆಯವರಿಗೆ ಆಕೆ ಏನೂ ಹೇಳಿಲ್ಲ. ಇದರಿಂದ ಅನುಮಾನಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ವಿವಾಹಿತ ಮಹಿಳೆಯರಿಂದ ಕಾನೂನು ದುರುಪಯೋಗ; ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಬಳಿಕ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

ಆ ಮಹಿಳೆಯ ಪತಿ ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆ ಮಹಿಳೆಯ ಕೃತ್ಯದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮನೆಯವರಿಗೂ ಆಕೆ ಮಗುವನ್ನು ಕೊಂದಿರುವುದು ಆಘಾತ ಉಂಟುಮಾಡಿದೆ. ಆಕೆಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ