ನವದೆಹಲಿ: ಜಾರ್ಖಂಡ್ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾಯಿಯೊಬ್ಬಳು ಒಂದು ವಾರದ ಹಿಂದೆ ಹುಟ್ಟಿದ್ದ ತನ್ನ ಮಗುವನ್ನು ನದಿಗೆ ಎಸೆದು ಕೊಂದಿದ್ದಾಳೆ. ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ತನ್ನ ಹೆಣ್ಣು ಮಗುವನ್ನು ನದಿಗೆ ಎಸೆದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ಕೃತ್ಯದಿಂದ ಶಿಶು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜದುಗೋರಾದ ದುರ್ಕು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ 30 ವರ್ಷದ ಮಹಿಳೆ ತನ್ನ ಮಗುವಿನೊಂದಿಗೆ ಸಮೀಪದ ನದಿಗೆ ಸ್ನಾನಕ್ಕೆ ತೆರಳಿದ್ದಳು. ಆಗ ಆಕೆ ಮಗುವನ್ನು ಬೇಕೆಂದೇ ನದಿಗೆ ಎಸೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಮುಸಾಬಾನಿ) ಸಂದೀಪ್ ಭಗತ್ ತಿಳಿಸಿದ್ದಾರೆ. ಮಗು ಎಲ್ಲಿ ಎಂದು ಕೇಳಿದಾಗ ಮನೆಯವರಿಗೆ ಆಕೆ ಏನೂ ಹೇಳಿಲ್ಲ. ಇದರಿಂದ ಅನುಮಾನಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ವಿವಾಹಿತ ಮಹಿಳೆಯರಿಂದ ಕಾನೂನು ದುರುಪಯೋಗ; ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಬಳಿಕ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ
ಆ ಮಹಿಳೆಯ ಪತಿ ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆ ಮಹಿಳೆಯ ಕೃತ್ಯದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮನೆಯವರಿಗೂ ಆಕೆ ಮಗುವನ್ನು ಕೊಂದಿರುವುದು ಆಘಾತ ಉಂಟುಮಾಡಿದೆ. ಆಕೆಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ