ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ, ಪ್ರಕರಣ ದಾಖಲು

ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ಮಹಿಳೆಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿದ್ದರು. ಇದೀಗ ಪ್ರಕರಣದ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮೃತೆಯ ಕುಟುಂಬಸ್ಥರು ಠಾಣೆಗೆ ದೂರು ನೀಡಿದ್ದಾರೆ.

ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ, ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Edited By:

Updated on: Sep 23, 2023 | 8:06 PM

ಧಾರವಾಡ, ಸೆ.23: ಜಿಲ್ಲೆಯ (Dharwad) ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ಮಹಿಳೆಯೊಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿದ್ದರು. ಇದೀಗ ಪ್ರಕರಣದ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮೃತೆಯ ಕುಟುಂಬಸ್ಥರು ಠಾಣೆಗೆ ದೂರು ನೀಡಿದ್ದಾರೆ.

ಕಳೆದ 5 ವರ್ಷಗಳ‌ ಹಿಂದೆ ಸುಮಂಗಲಾ ಅವರನ್ನು ಬೋಗೆನಾಗರಕೊಪ್ಪ ಗ್ರಾಮದ ಪ್ರವೀಣ್ ತಿಪ್ಪಣ್ಣವರ್ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ವರದಕ್ಷಿಣೆಗಾಗಿ ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು ಎಂದು ಸುಮಂಗಲಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಧಾರವಾಡ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುಮಂಗಲಾ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲಾಗಿದೆ ಎಂದು ಮೃತೆಯ ಕುಟುಂಬಸ್ಥರು ಆರೋಪಿಸಿ ಪ್ರವೀಣ್ ಹಾಗೂ ಆತನ‌ ಕುಟುಂಬಸ್ಥರ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Sat, 23 September 23