Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರೆರೆಚಿದ್ದಕ್ಕೆ ವಿದ್ಯಾರ್ಥಿನಿಯಿಂದ ಅವಮಾನ, ಕೋಪಗೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ

ಬೈಕ್​ನಲ್ಲಿ ಹೋಗುವಾಗ ಕೆಸರು ತಾಗಿದ್ದಕ್ಕೆ ಅವಮಾನ ಮಾಡಿದ್ದ ವಿದ್ಯಾರ್ಥಿನಿ ಮೇಲೆ ವ್ಯಕ್ತಿ ಹಾಗೂ ಅವನ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ಕಾಲೇಜು ವಿದ್ಯಾರ್ಥಿನಿ ಮೊಬೈಲ್​ನ್ನು ಅಂಗಡಿಗೆ ರಿಪೇರಿಗೆ ಕೊಡಲೆಂದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಕ್ರೈಂImage Credit source: Telegraph
Follow us
ನಯನಾ ರಾಜೀವ್
|

Updated on: Sep 24, 2024 | 9:44 AM

ಬೈಕ್​ನಲ್ಲಿ ಹೋಗುವಾಗ ಕೆಸರು ತಾಗಿದ್ದಕ್ಕೆ ಅವಮಾನ ಮಾಡಿದ್ದ ವಿದ್ಯಾರ್ಥಿನಿ ಮೇಲೆ ವ್ಯಕ್ತಿ ಹಾಗೂ ಅವನ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ಕಾಲೇಜು ವಿದ್ಯಾರ್ಥಿನಿ ಮೊಬೈಲ್​ನ್ನು ಅಂಗಡಿಗೆ ರಿಪೇರಿಗೆ ಕೊಡಲೆಂದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ವಿಚಾರಣೆ ವೇಳೆ, ಪ್ರಮುಖ ಆರೋಪಿ ಕಿಶನ್ ಕೋಲ್, ತನ್ನ ಬೈಕ್​ನಲ್ಲಿ ಸಾಕಷ್ಟು ಕೆಸರು ಇರುವ ರಸ್ತೆಯಲ್ಲಿ ಹೋಗುತ್ತಿದ್ದೆವು, ರಸ್ತೆಬದಿಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕೆಸರು ತಾಗಿತ್ತು. ಅಷ್ಟೆಲ್ಲಾ ಜನರ ಎದುರು ತನಗೆ ಅವಮಾನ ಮಾಡಿದ್ದಳು ಎಂದು ಆರೋಪಿ ಹೇಳಿದ್ದು, ಇದರಿಂದ ತನಗೆ ಮುಜುಗರ ಉಂಟಾಯಿತು ಎಂದಿದ್ದಾನೆ.

ಅವಮಾನದಿಂದ ಕೋಪಗೊಂಡ ಆರೋಪಿಗಳು ಸಂತ್ರಸ್ತೆಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ. ಸೆಪ್ಟೆಂಬರ್ 22 ರಂದು ಕಿಶನ್ ಕೋಲ್ ಮತ್ತು ಆತನ ಸ್ನೇಹಿತ ಸಂತಲಾಲ್ ಆಕೆಯನ್ನು ಅಪಹರಿಸಿ ಪೊದೆಗಳ ಹಿಂದೆ ಕರೆದೊಯ್ದು ಅಲ್ಲಿ ಅಪರಾಧ ಎಸಗಿದ್ದರು.

ಮತ್ತಷ್ಟು ಓದಿ: ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ

ಘಟನೆಯ ಬಗ್ಗೆ ವಿದ್ಯಾರ್ಥಿನಿ ತನ್ನ ಕುಟುಂಬಕ್ಕೆ ತಿಳಿಸಿದ್ದು, ನಂತರ ದೂರು ದಾಖಲಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವಿದ್ಯಾರ್ಥಿನಿ ದೂರು ಮತ್ತು ಹೇಳಿಕೆ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ