AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ

ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯ ಮೇಲೆ ಪ್ರಾಪರ್ಟಿ ಡೀಲರ್ ಹಾಗೂ ಮತ್ತವನ ಸ್ನೇಹಿತ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ಬುರಾರಿಯಲ್ಲಿ ನಡೆದಿದೆ. 52 ವರ್ಷದ ಪ್ರಾಪರ್ಟಿ ಡೀಲರ್​ನನ್ನು ಪೊಲೀಸರು ಬಂಧಿಸಿತ್ತು, ಆತನ ಸ್ನೇಹಿತನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ

ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ
ಅತ್ಯಾಚಾರImage Credit source: India Today
ನಯನಾ ರಾಜೀವ್
|

Updated on: Oct 31, 2023 | 12:29 PM

Share

ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯ ಮೇಲೆ ಪ್ರಾಪರ್ಟಿ ಡೀಲರ್ ಹಾಗೂ ಮತ್ತವನ ಸ್ನೇಹಿತ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ಬುರಾರಿಯಲ್ಲಿ ನಡೆದಿದೆ. 52 ವರ್ಷದ ಪ್ರಾಪರ್ಟಿ ಡೀಲರ್​ನನ್ನು ಪೊಲೀಸರು ಬಂಧಿಸಿತ್ತು, ಆತನ ಸ್ನೇಹಿತನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ದೆಹಲಿ ಪೊಲೀಸರ ಪ್ರಕಾರ, 30 ವರ್ಷದ ಮಹಿಳೆ ಬಾಡಿಗೆ ಮನೆಯನ್ನು ಹುಡುಕುತ್ತಿದ್ದರು, ಆಗ ಈ ಪ್ರಾಪರ್ಟಿ ಡೀಲರ್​ ಜಿತೇಂದ್ರ ಸಿಂಗ್​ನನ್ನು ಭೇಟಿಯಾಗಿದ್ದಳು.

ಬಾಡಿಗೆಗೆ ಲಭ್ಯವಿರುವ ಮನೆಯನ್ನು ಆಕೆಗೆ ತೋರಿಸುವ ನೆಪದಲ್ಲಿ, ಚೌಧರಿ ಮತ್ತು ಆತನ ಸ್ನೇಹಿತ ಭಾನುವಾರ ಮಹಿಳೆಯನ್ನು ಫ್ಲಾಟ್‌ಗೆ ಕರೆದೊಯ್ದರು, ಅಲ್ಲಿ ನಿದ್ರೆ ಮಾತ್ರೆಯನ್ನು ನೀರಿನಲ್ಲಿ ಬೆರೆಸಿ ನೀಡಿದ್ದರು.

ನೀರು ಕುಡಿದ ನಂತರ ಸಂತ್ರಸ್ತೆ ಪ್ರಜ್ಞಾಹೀನಳಾಗಿದ್ದಳು ಮತ್ತು ಇಬ್ಬರೂ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ಬೆಳಗಾವಿ: ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಹಿಳೆ ಮೇಲಿನ ಗ್ಯಾಂಗ್ ರೇಪ್ ಬಾಯ್ಬಿಟ್ಟ ಆರೋಪಿಗಳು

‘ಇಲ್ಲಿನ ಬುರಾರಿ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಡಿ) (ಗ್ಯಾಂಗ್ ರೇಪ್), 328 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!