ದೇವನಹಳ್ಳಿಯಲ್ಲಿ ಮಚ್ಚಿನಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು ಗ್ರಾಮಾಂತರ: ಜಮೀನು ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆಯೇ 50 ವರ್ಷದ ರತ್ನಮ್ಮ ಎಂಬುವವರನ್ನು ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಮೀನು ವಿವಾದಕ್ಕೆ ಈ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ದೇವನಹಳ್ಳಿಯಲ್ಲಿ ಮಚ್ಚಿನಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ
ಸಾಧು ಶ್ರೀನಾಥ್​

Updated on: Dec 24, 2019 | 12:23 PM

ಬೆಂಗಳೂರು ಗ್ರಾಮಾಂತರ: ಜಮೀನು ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆಯೇ 50 ವರ್ಷದ ರತ್ನಮ್ಮ ಎಂಬುವವರನ್ನು ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇಂದು ಬೆಳಗ್ಗೆ ಮಕ್ಕಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಮೀನು ವಿವಾದಕ್ಕೆ ಈ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 12:19 pm, Tue, 24 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us