Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಬೇಕಿದ್ದ ಯುವಕನೊಂದಿಗೆ ವಾಕಿಂಗ್​ಗೆ ತೆರಳಿದ್ದಾಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ

ಮದುವೆಯಾಗಬೇಕಿದ್ದ ಯುವಕನೊಂದಿಗೆ ವಾಕಿಂಗ್ ತೆರಳಿದ್ದಾಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್​ನ ಪಶ್ಚಿಮ ಸಿಂಗ್​ಭೂಮ್​ನಲ್ಲಿ ನಡೆದಿದೆ. ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಜಾಲ್ ಗ್ರಾಮದ ಬಳಿ ಗುರುವಾರ ಸಂಜೆ ಇಬ್ಬರೂ ವಾಕಿಂಗ್ ಮಾಡುತ್ತಿರುವಾಗ ಘಟನೆ ಸಂಭವಿಸಿದೆ.

ಮದುವೆಯಾಗಬೇಕಿದ್ದ ಯುವಕನೊಂದಿಗೆ ವಾಕಿಂಗ್​ಗೆ ತೆರಳಿದ್ದಾಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ
Image Credit source: India Today
Follow us
ನಯನಾ ರಾಜೀವ್
|

Updated on: Sep 23, 2023 | 8:05 AM

ಜಾರ್ಖಂಡ್, ಸೆಪ್ಟೆಂಬರ್ 23: ಮದುವೆಯಾಗಬೇಕಿದ್ದ ಯುವಕನೊಂದಿಗೆ ವಾಕಿಂಗ್ ತೆರಳಿದ್ದಾಗ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್​ನ ಪಶ್ಚಿಮ ಸಿಂಗ್​ಭೂಮ್​ನಲ್ಲಿ ನಡೆದಿದೆ. ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಜಾಲ್ ಗ್ರಾಮದ ಬಳಿ ಗುರುವಾರ ಸಂಜೆ ಇಬ್ಬರೂ ವಾಕಿಂಗ್ ಮಾಡುತ್ತಿರುವಾಗ ಘಟನೆ ಸಂಭವಿಸಿದೆ.

ಆಕೆಯ ಮೇಲೆ ಅತ್ಯಾಚಾರ ನಡೆಸಿದ ಗುಂಪು ಆಕೆಯ ಬಳಿ ಇದ್ದ ಬ್ಯಾಗ್ ಹಾಗೂ ಮೊಬೈಲ್​ ಫೋನ್​ ಅನ್ನು ಕದ್ದೊಯ್ದಿದ್ದಾರೆ. ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದರು.

ಆಕೆಯ ಸಂಗಾತಿ ಹೇಗೋ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ, ತಕ್ಷಣವೇ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಆಕೆಗೆ ತ್ವರಿತ ನೆರವು ನೀಡಿದ ನಂತರ ಆಕೆಯನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ಅಶುತೋಷ್ ಶೇಖರ್ ತಿಳಿಸಿದ್ದಾರೆ. ಯುವತಿ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಶುಕ್ರವಾರ ಕಿಟಗುತ್ತು ಗ್ರಾಮದ ಐವರನ್ನು ಬಂಧಿಸಿದ್ದಾರೆ.

ಪೊಲೀಸರು ಬ್ಯಾಗ್ ಮತ್ತು ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಎಸ್​ಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹರ್ಯಾಣದಲ್ಲಿ ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಮತ್ತೊಂದು ಘಟನೆ

ಕುಟುಂಬದೆದುರೇ ಮೂವರು ಮಹಿಳೆಯರ ಮೇಲೆ ಅತ್ಯಾಚಾರ

ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹರ್ಯಾಣದ ಪಾಣಿಪತ್​ನಲ್ಲಿ ನಡೆದಿದೆ. ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅತ್ಯಾಚಾರ ಮಾಡುವ ಮೊದಲು ಆರೋಪಿಗಳು ಮೂವರು ಮಹಿಳೆಯ ಕುಟುಂಬ ಸದಸ್ಯರನ್ನು ಹಗ್ಗಗಳಿಂದ ಕಟ್ಟಿಹಾಕಿದ್ದರು. ಆರೋಪಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ