Crime News: ಬಿಜೆಪಿ ಮಾಜಿ ಶಾಸಕರ ಮನೆ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ

ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವುದರಿಂದ ಸುತ್ತಮುತ್ತ ಆತಂಕ ಸೃಷ್ಟಿಯಾಗಿದ್ದು, ಜನಸಾಗರವೇ ನೆರೆದಿತ್ತು. ಸತಾರಾ ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

Crime News: ಬಿಜೆಪಿ ಮಾಜಿ ಶಾಸಕರ ಮನೆ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ
ಸಾಂದರ್ಭಿಕ ಚಿತ್ರ
Edited By:

Updated on: Dec 31, 2022 | 11:36 AM

ಮುಂಬೈ: ಮಹಾರಾಷ್ಟ್ರದ (Maharashtra) ಸತಾರಾದಲ್ಲಿ ಬಿಜೆಪಿಯ ಮಾಜಿ ಶಾಸಕರೊಬ್ಬರ ಮನೆಯ ಹಿಂದೆ ಮಣ್ಣಿನಡಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ (Dead Body) ಪತ್ತೆಯಾಗಿದೆ. ಸತಾರಾದ ವಾಡೆ ಗ್ರಾಮದಲ್ಲಿರುವ ಬಿಜೆಪಿಯ ಮಾಜಿ ಶಾಸಕರಾದ ಕಾಂತಾತಾಯಿ ನಲವಾಡೆ ಅವರ ಬಂಗಲೆಯ ಬಳಿ ದುರ್ವಾಸನೆ ಬೀರುತ್ತಿದ್ದ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೌರ ಕಾರ್ಮಿಕರು ಆ ಪ್ರದೇಶವನ್ನು ಸ್ವಚ್ಛಗೊಳಿಸುವ ವೇಳೆ ಕೊಳೆತ ಶವ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವುದರಿಂದ ಸುತ್ತಮುತ್ತ ಆತಂಕ ಸೃಷ್ಟಿಯಾಗಿದ್ದು, ಜನಸಾಗರವೇ ನೆರೆದಿತ್ತು. ಸತಾರಾ ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ತಮ್ಮನ ಮರ್ಡರ್, 3 ದಿನಗಳ ಬಳಿಕ ಶವ ಪತ್ತೆ, ಕೊಲೆ ರಹಸ್ಯ ಬೇಧಿಸಿದ ಸೊರಬ ಪೊಲೀಸರು

2022ರಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಬ್ಬರು ಸಹೋದರರ ಕುಟುಂಬದ 9 ಸದಸ್ಯರು ಶವವಾಗಿ ಪತ್ತೆಯಾಗಿದ್ದರು. ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯ ಮಹೈಸಾಲ್ ಗ್ರಾಮದಲ್ಲಿ 1.5 ಕಿಮೀ ಅಂತರದಲ್ಲಿರುವ ಸಹೋದರರ ಎರಡು ಮನೆಗಳಲ್ಲಿ ಶವಗಳು ಪತ್ತೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Sat, 31 December 22