ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವ ಮಹಿಳೆಯ ಮೃತದೇಹ ಪತ್ತೆ

| Updated By: ಸಾಧು ಶ್ರೀನಾಥ್​

Updated on: Sep 01, 2022 | 5:23 PM

ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವ ಮಹಿಳೆಯ ಮೃತದೇಹ ಪತ್ತೆ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಬಾಪೂಜಿನಗರದಲ್ಲಿ ತಾವು ವಾಸವಾಗಿದ್ದ ಮನೆಯಲ್ಲೆ ಶಿಲ್ಪಾ (26) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರ ಜೊತೆ ವಿದೇಶಿ ಮಹಿಳೆಯರ ಗಲಾಟೆ ಪ್ರಕರಣ: ವಿದೇಶಿ ಮಹಿಳೆ ಬಂಧನ

ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಪೊಲೀಸರ ಜೊತೆ ವಿದೇಶಿ ಮಹಿಳೆಯರು ನಡೆಸಿದ್ದ ಗಲಾಟೆ ಪ್ರಕರಣದಲ್ಲಿ ಅಶೋಕನಗರ ಠಾಣೆಯ ಪೊಲೀಸರು ಓರ್ವ ವಿದೇಶಿ ಮಹಿಳೆಯನ್ನು ಬಂಧಿಸಿದ್ದಾರೆ. ಜುಲಿಯೋ ವೆಂಜಿರೋ ಬಂಧಿತ ಮಹಿಳೆ. ಟೂರಿಸಂ ವೀಸಾದಲ್ಲಿ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ವೀಸಾ ಅವಧಿ ಮುಗಿದಿದ್ದರೂ ಇಲ್ಲಿ ಅಕ್ರಮವಾಗಿ ನೆಲಸಿದ್ದಳು. ಸದರಿ ಮಹಿಳೆ ಕುಡಿತದ ನಶೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಳು. ಸದ್ಯ ಪರಾರಿಯಾಗಿರುವ ಇನ್ನೊಬ್ಬ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕುಖ್ಯಾತ ಬೈಕ್ ಕಳ್ಳ ಅರೆಸ್ಟ್:

ಬೆಂಗಳೂರು: ಕುಖ್ಯಾತ ಬೈಕ್ ಕಳ್ಳ ಶಬ್ಬೀರ್ ಪಾಷಾನನ್ನು ಬಂಧಿಸಿ, ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು 2 ಲಕ್ಷ ರೂ. ಮೌಲ್ಯದ 5 ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿ ಶಬ್ಬೀರ್ ಪಾಷಾ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದಿದ್ದ.

ಕಾಲು ಜಾರಿ ಹಳ್ಳದಲ್ಲಿ ಬಿದ್ದಿದ್ದ ವೃದ್ಧೆಯ ಮೃತದೇಹ ಪತ್ತೆ

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಳೆವೀರಾಪುರ ಗ್ರಾಮದ ಬಳಿ ಕಾಲು ಜಾರಿ ಹಳ್ಳದಲ್ಲಿ ಬಿದ್ದಿದ್ದ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಬಡಿಮಾ ಮುದ್ದಿನಕೊಪ್ಪ 70 ವರ್ಷ ಮೃತ ವೃದ್ಧೆ. ವೃದ್ಧೆ ಬಡಿಮಾ ಕಟ್ಟಿಗೆ ತರಲು ಹೋಗಿದ್ದ ವೇಳೆ ನಿನ್ನೆ ಸಂಜೆ ಕಾಲು ಜಾರಿ ಹಳ್ಳದಲ್ಲಿ ಬಿದ್ದಿದ್ದರು.

ಹಳ್ಳದಲ್ಲಿ ಮುಳ್ಳಿನ ಕಂಟೆಗೆ ಸಿಕ್ಕಿಹಾಕಿಕೊಂಡಿದ್ದಾಗ ವೃದ್ಧೆಯ ಮೃತದೇಹ ಸಿಕ್ಕಿದೆ. ಸ್ಥಳಕ್ಕೆ ಹಿರೇಕೆರೂರು ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತಾಲೂಕು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಗಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಕಲಾಗಿದೆ.

Published On - 2:35 pm, Thu, 1 September 22