ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಿ ವಿಡಿಯೋ ಮಾಡಿದ್ದ ಆರೋಪಿಯ ಬಂಧನ

ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆಗೆಂದು ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಕೋಲ್ಕತ್ತಾ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಹತ್ಯೆ ಘಟನೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವಾಗಲೇ ಇಂಥಾ ಘಟನೆಯೊಂದು ಮುನ್ನೆಲೆಗೆ ಬಂದಿದೆ.

ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಿ ವಿಡಿಯೋ ಮಾಡಿದ್ದ ಆರೋಪಿಯ ಬಂಧನ
ಅಪರಾಧImage Credit source: Telegraph India
Follow us
ನಯನಾ ರಾಜೀವ್
|

Updated on: Sep 16, 2024 | 8:56 AM

ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಾಚಿಕೆಗೇಡಿನ ಕೃತ್ಯವೊಂದು ನಡೆದಿದೆ. ಮಲಗಿದ್ದ ಮಹಿಳೆಯ ಬಟ್ಟೆ ಬಿಚ್ಚಿ ವಿಡಿಯೋ ಮಾಡಿರುವ ಅಮಾನವೀಯ ಘಟನೆ ವರದಿಯಾಗಿದೆ. ಇತ್ತೀಚೆಗಷ್ಟೇ ಕೋಲ್ಕತ್ತಾ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಹತ್ಯೆ ಘಟನೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವಾಗಲೇ ಇಂಥಾ ಘಟನೆಯೊಂದು ಮುನ್ನೆಲೆಗೆ ಬಂದಿದೆ.

ಮಹಿಳೆ ತನ್ನ ಮಗುವಿಗೆ ಚಿಕಿತ್ಸೆ ಕೊಡಿಸಲು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು, ಮಹಿಳೆ ಕೋಲ್ಕತ್ತಾದ ಅಲಿಪುರ ಪ್ರದೇಶದ ನಿವಾಸಿಯಾಗಿದ್ದಾರೆ. ಆಕೆಗೆ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಕಿರುಕುಳ ನೀಡಿದ್ದಾರೆ, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ ಆರೋಪಿಯನ್ನು 26 ವರ್ಷದ ತನಯ್ ಪಾಲ್ ಎಂದು ಗುರುತಿಸಲಾಗಿದೆ. ಆತ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದಾನೆ, ಮಕ್ಕಳ ವಾರ್ಡಿಗೆ ತೆರಳಿ ಮಲಗಿದ್ದ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸತೊಡಗಿದ. ಒತ್ತಾಯಪೂರ್ವಕವಾಗಿ ಆಕೆಯ ಬಟ್ಟೆಯನ್ನು ತೆಗೆದು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: 5 ವರ್ಷದ ಮಗಳಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ

ಪೊಲೀಸರು ಪಾಲ್ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ನರ್ಸ್‌ಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ತೀವ್ರ ಜ್ವರದ ಕಾರಣ ಸ್ಟ್ರೆಚರ್‌ನಲ್ಲಿ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದ ವ್ಯಕ್ತಿಗೆ ನರ್ಸ್ ಸಲೈನ್ ಡ್ರಿಪ್ ಹಾಕುತ್ತಿದ್ದಾಗ ಈ ಘಟನೆ ನಡೆದಿದೆ.

ನರ್ಸ್ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ರೋಗಿಯು ಆತನಿಗೆ ಚಿಕಿತ್ಸೆ ನೀಡುತ್ತಿರುವಾಗ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ರೋಗಿಯು ತನ್ನನ್ನು ಅನುಚಿತವಾಗಿ ಮುಟ್ಟಿದ್ದಲ್ಲದೆ ತನ್ನ ವಿರುದ್ಧ ಆಕ್ಷೇಪಾರ್ಹ ಭಾಷೆಯನ್ನೂ ಬಳಸಿದ್ದಾನೆ ಎಂದು ನರ್ಸ್ ಆರೋಪಿಸಿದ್ದಾರೆ. ಘಟನೆ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ