ಅಪಹರಣ, ಸಾಮೂಹಿಕ ಅತ್ಯಾಚಾರ, ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಮಹಿಳೆಯನ್ನು ಎಸೆದು ಹೋದ ಆರೋಪಿಗಳು

ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಎಸೆದು ಹೋದ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ. ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು ಇತ್ತು, ಬಟ್ಟೆ ಇರಲಿಲ್ಲ, ಸಹಾಯಕ್ಕಾಗಿ ಜನರಲ್ಲಿ ಅಂಗಲಾಚುತ್ತಿದ್ದಳು. ಬಳಿಕ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆಯ ಹೇಳಿಕೆ ಪಡೆದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಅಪಹರಣ, ಸಾಮೂಹಿಕ ಅತ್ಯಾಚಾರ, ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಮಹಿಳೆಯನ್ನು ಎಸೆದು ಹೋದ ಆರೋಪಿಗಳು
Image Credit source: Mint

Updated on: Sep 10, 2023 | 11:08 AM

ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ವಿವಸ್ತ್ರಗೊಳಿಸಿ ರಸ್ತೆಯಲ್ಲೇ ಎಸೆದು ಹೋದ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ. ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು ಇತ್ತು, ಬಟ್ಟೆ ಇರಲಿಲ್ಲ, ಸಹಾಯಕ್ಕಾಗಿ ಜನರಲ್ಲಿ ಅಂಗಲಾಚುತ್ತಿದ್ದಳು. ಬಳಿಕ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆಯ ಹೇಳಿಕೆ ಪಡೆದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಶನಿವಾರ ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಮಹಿಳೆಯನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿದ್ದರು. ಬಳಿಕ ಸಾಮೂಹಿಕ ಅತ್ಯಾಚಾರವೆಸಗಿ ಮೈತುಂಬಾ ಗಾಯಗಳನ್ನು ಮಾಡಿದ್ದಾರೆ. ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಮಹಿಳೆ ಜನರಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದಳು, ಯಾರೂ ಕೂಡ ಆಕೆಗೆ ಸಹಾಯ ಮಾಡಲಿಲ್ಲ, ಯಾರೋ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮತ್ತಷ್ಟು ಓದಿ: ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಇಬ್ಬರು ಆರೋಪಿಗಳಲ್ಲಿ ಒಬ್ಬರು ಮಹಿಳೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಎಂದು ಗಂಗಾಪುರ ಪೊಲೀಸ್ ಠಾಣೆಯ ಎಸ್​ಎಚ್​ಒ ನರೇಂದ್ರ ಜೈನ್ ತಿಳಿಸಿದ್ದಾರೆ. ಇದಾದ ಬಳಿಕ ಮಹಿಳೆಯನ್ನು ಅಮ್ಲಿ ರಸ್ತೆಯಲ್ಲಿರುವ ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಆಗಸ್ಟ್ 4ರಂದು ರಾಜಸ್ಥಾನದ ಬಿಲ್ವಾರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಬಳಿಕ ಆಕೆಯನ್ನು ಸಜೀವವಾಗಿ ದಹಿಸಿದ್ದರು. ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಸಿಕ್ಕಿಬೀಳುವ ಭಯದಿಂದ ಯುವಕರು ಗ್ರಾಮದ ಹೊರಗೆ ಇಟ್ಟಿಗೆ ಗೂಡೊಂದರಲ್ಲಿ ಆಕೆಯನ್ನು ಸುಟ್ಟು ಹಾಕಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us