Crime News: ಮಾನಸಿಕ ಅಸ್ವಸ್ಥ ಮಗನನ್ನು ಚಂಬಲ್ ನದಿಗೆ ಎಸೆದ ತಾಯಿಯ ಬಂಧನ

ನಾಲ್ಕು ವರ್ಷದ ಮಾನಸಿಕ ಅಸ್ವಸ್ಥ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ 26 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ನಿವಾಸಿ ದಿಲ್ ಅಫ್ರೋಜ್ ದಾದಾಬರಿ ಪ್ರದೇಶದ ಚಂಬಲ್ ನದಿಗೆ ತನ್ನ ಮಗನನ್ನು ಎಸೆದಿದ್ದಳು.

Crime News: ಮಾನಸಿಕ ಅಸ್ವಸ್ಥ ಮಗನನ್ನು ಚಂಬಲ್ ನದಿಗೆ ಎಸೆದ ತಾಯಿಯ ಬಂಧನ
ಪೊಲೀಸ್Image Credit source: NDTV
Follow us
|

Updated on:Mar 04, 2023 | 8:59 AM

ನಾಲ್ಕು ವರ್ಷದ ಮಾನಸಿಕ ಅಸ್ವಸ್ಥ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ 26 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ನಿವಾಸಿ ದಿಲ್ ಅಫ್ರೋಜ್ ದಾದಾಬರಿ ಪ್ರದೇಶದ ಚಂಬಲ್ ನದಿಗೆ ತನ್ನ ಮಗನನ್ನು ಎಸೆದಿದ್ದಳು.

ಬಾಲಕನಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ, ದೈಹಿಕವಾಗಿ ದುರ್ಬಲನಾಗಿದ್ದ ಹೀಗಾಗಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಅಫ್ರೋಜ್ ತನ್ನ ಆರು ವರ್ಷದ ಮಗಳು ಮತ್ತು ಮಗನೊಂದಿಗೆ ಬರಾನ್ ಜಿಲ್ಲೆಯ ಮ್ಯಾಂಗ್ರೋಲ್‌ನಿಂದ ಬಸ್‌ನಲ್ಲಿ 90 ಕಿಲೋಮೀಟರ್ ಪ್ರಯಾಣಿಸಿದ್ದಳು. ಸೋಮವಾರ ಪತಿಯೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಮನೆಯವರು ಮಾಂಗ್ರೋಲ್‌ಗೆ ಬಂದಿದ್ದರು. ಬೆಳಗ್ಗೆ ಕೋಟಾ ತಲುಪಿದ್ದಾರೆ.

ಅಫ್ರೋಜ್ ದಾದಾಬರಿಯ ಚಂಬಲ್ ದಡದಲ್ಲಿರುವ ಅಧರ್ಶೀಲಾಗೆ ಆಟೋರಿಕ್ಷಾವನ್ನು ಬಾಡಿಗೆಗೆ ಪಡೆದಿದ್ದಳು ಹಾಗೂ ಸ್ಥಳೀಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ತನ್ನ ಮಗನನ್ನು ನದಿಗೆ ಎಸೆದು ಬಂದಿದ್ದಳು, ಬಳಿಕ ಬಾಲಕನ ಶವ ನದಿಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬುಧವಾರ ಆರೋಪಿ ಮಹಿಳೆ ಹಾಗೂ ಟೈಲರಿಂಗ್ ಅಂಗಡಿ ನಡೆಸುತ್ತಿರುವ ಆಕೆಯ ಪತಿಯನ್ನು ವಿಚಾರಣೆ ನಡೆಸಿದ ಬಳಿಕ ಬಾಲಕನ ಗುರುತು ಪತ್ತೆಯಾಗಿದೆ.

ಮತ್ತಷ್ಟು ಓದಿ:ಓಡಿ ಹೋದ ಪ್ರೇಮಿಗಳ ಕುಟುಂಬದ ನಡುವೆ ಗಲಾಟೆ; ನ್ಯಾಯ ಪಂಚಾಯ್ತಿ ಮಾಡಲು ಹೋಗಿ ಕೊಲೆಯಾದ

ಅಫ್ರೋಜ್‌ನನ್ನು ಬಂಧಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗಿ ಏಳು ವರ್ಷಗಳಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Sat, 4 March 23

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ