Bangalore: ಮ್ಯಾಟ್ರಿಮೋನಿಯಲ್​ನಲ್ಲಿ ಪರಿಚಯವಾದ ಮಹಿಳೆಯನ್ನು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಸಾಫ್ಟ್​ವೇರ್ ಇಂಜಿನಿಯರ್

Matrimony: ಬೆಂಗಳೂರಿನ ಸಾಫ್ಟ್​​ವೇರ್ ಇಂಜಿನಿಯರ್​ ಒಬ್ಬರು ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ ಪರಿಚಯವಾಗಿದ್ದ ಮಹಿಳೆಯನ್ನು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವಂತಾಗಿದೆ. ಸದ್ಯ ಸೈಬರ್ ಅಪರಾಧಿಗಳ ವಂಚನೆ ಬಲೆಗೆ ಸಿಲುಕಿ ಹಣ ಕಳೆದುಕೊಂಡ ಮಾರತ್ತಹಳ್ಳಿಯ 48 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Bangalore: ಮ್ಯಾಟ್ರಿಮೋನಿಯಲ್​ನಲ್ಲಿ ಪರಿಚಯವಾದ ಮಹಿಳೆಯನ್ನು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಸಾಫ್ಟ್​ವೇರ್ ಇಂಜಿನಿಯರ್
woman who was introduced to matrimonial site duped of Rs 34 lakh to software engineer of Bengaluru
Follow us
Rakesh Nayak Manchi
|

Updated on:May 06, 2023 | 3:53 PM

ಬೆಂಗಳೂರು: ಬಾಳ ಸಂಗಾತಿಯನ್ನು ಹುಡುಕಲು ಸಹಾಯಕವಾಗುವ ಮ್ಯಾಟ್ರಿಮೋನಿಯಲ್​ ಸೈಟ್​ನಲ್ಲಿ (Matrimony) ವಂಚನೆಗೆ ಒಳಗಾದ ಪ್ರಕರಣಗಳು ನಡೆದಿವೆ. ಇದೀಗ ಬೆಂಗಳೂರಿನ (Bengaluru) ಸಾಫ್ಟ್​​ವೇರ್ ಇಂಜಿನಿಯರ್​ ಒಬ್ಬರು ಇದೇ ಸೈಟ್​ನಲ್ಲಿ ಪರಿಚಯವಾಗಿದ್ದ ಮಹಿಳೆಯನ್ನು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುವಂತಾಗಿದೆ. ಸದ್ಯ ಸೈಬರ್ ಅಪರಾಧಿಗಳ ವಂಚನೆ ಬಲೆಗೆ ಸಿಲುಕಿ ಹಣ ಕಳೆದುಕೊಂಡ ಮಾರತ್ತಹಳ್ಳಿಯ 48 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮಾರತ್ತಹಳ್ಳಿ ಸಮೀಪದ ಮುನ್ನೆಕೊಲ್ಲಲ್ ನಿವಾಸಿ ಸಲ್ಮಾನ್ (ಹೆಸರು ಬದಲಿಸಲಾಗಿದೆ) ವೈವಾಹಿಕ ಸೈಟ್​ನಲ್ಲಿ ತನ್ನ ಪ್ರೊಫೈಲ್ ಅಪ್ಲೋಡ್ ಮಾಡಿದ್ದ. ಈ ಸೈಟ್​ನಲ್ಲಿ ಫಾತಿಮಾ ಮುಹಮ್ಮದ್​ ಎಂಬ ಖಾತೆಯಿಂದ ಏಪ್ರಿಲ್ ಮೊದಲ ವಾರದಲ್ಲಿ ಸಲ್ಮಾನ್​ನನ್ನು ಸಂಪರ್ಕಿಸಲಾಗಿದೆ. ತಾನು ಲಂಡನ್​ನಲ್ಲಿ ನೆಲೆಸಿದ್ದು, ಶೀಘ್ರದಲ್ಲೇ ಭಾರತಕ್ಕೆ ಮರಳುತ್ತೇನೆ ಎಂದು ಹೇಳಿಕೊಂಡಿದ್ದಳು.

ಹೀಗೆ ಪರಿಚಯ ಮಾಡಿಕೊಂಡ ಫಾತಿಮಾ, ಸಲ್ಮಾನ್ ಮೇಲೆ ಆಸಕ್ತಿಯನ್ನು ತೋರಿದ್ದಾಳೆ. ಹೀಗೆ ಪರಸ್ಪರ ಮಾತುಕತೆ ನಡೆಯುತ್ತಿದ್ದಾಗ ಸಲ್ಮಾನ್​ಗೆ ಏಪ್ರಿಲ್ 11ರಂದು ಮಹಿಳೆಯೊಬ್ಬರು ಕರೆ ಮಾಡಿ ತಾನು ಕಸ್ಟಮ್ಸ್ ಅಧಿಕಾರಿ ಮನಿಷಾ ಶರ್ಮಾ ಎಂದು ಪರಿಚಯಿಸಿಕೊಂಡಿದ್ದರು. ಫಾತಿಮಾ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದು 5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿದೇಶಿ ಕರೆನ್ಸಿಯನ್ನು ತಂದಿದ್ದರು ಮತ್ತು ಕಸ್ಟಮ್ಸ್ ಅಧಿಕಾರಿಗಳು ಅದನ್ನು ಅವರ ಕೆಲವು ದಾಖಲೆಗಳೊಂದಿಗೆ ವಶಪಡಿಸಿಕೊಂಡಿದ್ದಾರೆ ಎಂದು ಮನಿಷಾ ಸಲ್ಮಾನ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆ ಕಪಟ ಶ್ರೀಮಂತ ಬ್ಯಾಚುಲರ್ ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಯುವತಿಯರಿಗೆ ಲಕ್ಷ ಲಕ್ಷಗಳಲ್ಲಿ ವಂಚಿಸಿದ!

ಮನಿಷಾ ತನ್ನ ಹಣ ಮತ್ತು ಕಾಗದಪತ್ರಗಳನ್ನು ಬಿಡುಗಡೆ ಮಾಡಲು ತನ್ನ ಪರವಾಗಿ ಶುಲ್ಕ ಮತ್ತು ತೆರಿಗೆಗಳನ್ನು ಪಾವತಿಸುವಂತೆ ಸಲ್ಮಾನ್​ಗೆ ಸೂಚಿಸಿದ್ದಾಳೆ. ಅದರಂತೆ ಸಲ್ಮಾನ್ ಒಟ್ಟು 34,40,700 ರೂ.ಗಳನ್ನು ಮಹಿಳೆ ನೀಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಆದರೆ ಏಪ್ರಿಲ್ 19ರಿಂದ ಮನಿಷಾ ಆಗಲಿ ಅಥವಾ ಫಾತಿಮಾ ಆಗಲಿ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ.

ಸಲ್ಮಾನ್ ಫಾತಿಮಾಳನ್ನು ಸಂಪರ್ಕಿಸಲು ಮಾಡಿದ ಪ್ರಯತ್ನಗಳೆಲ್ಲವೂ ವ್ಯರ್ಥವಾದವು. ಕೊನೆಗೆ ತಾನು ಸೈಬರ್ ಅಪರಾಧಿಗಳ ಮೋಸದ ಜಾಲಕ್ಕೆ ಬಲಿಯಾಗಿರುವುದು ತಿಳಿದುಬಂದ ಹಿನ್ನೆಲೆ ಸೈಬರ್ ಠಾಣೆ ಮೆಟ್ಟಿಲೇರಿದ್ದಾರೆ. ವೈಟ್​ಫೀಲ್ಟ್​ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಮತ್ತಷ್ಟು ಕ್ರೈಂ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Sat, 6 May 23

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ