AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ

ಬೆಂಗಳೂರಿನ ಸರ್ಜಾಪುರದಲ್ಲಿ 35 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣ ಸ್ಥಳೀಯರು ಗ್ರಾಮ ಪಂಚಾಯತಿಗೆ ದೂರು ನೀಡಿದ್ದರು. ಚರಂಡಿ ಸ್ವಚ್ಛಗೊಳಿಸುವಾಗ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಚರಂಡಿಗೆ ಎಸೆದಿರಬಹುದಾಗಿ ಶಂಕಿಸಲಾಗಿದೆ.

ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ
ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ
ರಾಮು, ಆನೇಕಲ್​
| Edited By: |

Updated on: Nov 14, 2024 | 7:30 PM

Share

ಆನೇಕಲ್‌, ನವೆಂಬರ್​ 14: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ (Woman) ನಗ್ನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಬೇರೆಲ್ಲೂ ಕೊಲೆ ಮಾಡಿ ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಶ್ವಾನದಳದಿಂದ ಪರಿಶೀಲನೆ ಮಾಡಲಾಗಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಮೂರು ದಿನಗಳಿಂದ ಏರಿಯಾದಲ್ಲಿ ಕೆಟ್ಟ ವಾಸನೆ ಬರುತ್ತಿತ್ತು. ಹೀಗಾಗಿ ಇಲಿ ಸತ್ತಿರಬಹುದೆಂದು ಊಹಿಸಿ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿಗೆ ದೂರು ನೀಡಿದ್ದಾರೆ. ಪೌರ ಕಾರ್ಮಿಕರಿಂದ ಚರಂಡಿ ಸ್ವಚ್ಚತೆ ಮಾಡುವ ವೇಳೆ ಮೊದಲು ಕಾಲು ಕಾಣಿಸಿದ್ದು, ಪರಿಶೀಲನೆ ನಡೆಸಿದಾಗ ಕೊಳೆತ ಶವ ಪತ್ತೆ ಆಗಿದೆ.

ಇದನ್ನೂ ಓದಿ: ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ: ಬಸವನಗುಡಿ PSI ವಿರುದ್ಧ ಆಯುಕ್ತರಿಗೆ ದೂರು

ದುಷ್ಕರ್ಮಿಗಳು ವೈರ್‌ನಿಂದ ಕೈಕಾಲು ಕಟ್ಟಿ ಮಹಿಳೆಯನ್ನು ಕೊಲೆಗೈದು ಬಳಿಕ ಶವ ಚರಂಡಿಗೆ ಎಸೆದು ಹೋಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಸರ್ಜಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ: ಕೌಟುಂಬಿಕ ಕಲಹ ಶಂಕೆ

ಕೊಡಗು: ಇಂಜಿಲ್‌ಗೆರೆಯಲ್ಲಿ ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಇಂಜಿಲ್‌ಗೆರೆ ಗ್ರಾಮದಲ್ಲಿ ನಡೆದಿದೆ. ತಸ್ಕಿ(35) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಕೌಟುಂಬಿಕ ಕಲಹದಿಂದ ಶಫೀಕ್ ಪತ್ನಿ ತಸ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ ಬಂದೋಬ್ತಸ್​ಗೆ ತೆರಳಿದ್ದ ಪೊಲೀಸ್​ ಕಾನ್​​ಸ್ಟೇಬಲ್: ಬೆಳಗಾಗುವುದರಲ್ಲಿ ಸಾವು

ರಾಮನಗರ: ನಿನ್ನೆ ಚನ್ನಪಟ್ಟಣ ಉಪ ಚುನಾವಣೆ ಬಂದೋಬ್ತಸ್​ಗೆ ತೆರಳಿದ್ದ ಪೊಲೀಸ್​ ಕಾನ್​​ಸ್ಟೇಬಲ್ ಸಾವನ್ನಪ್ಪಿರುವಂತಹ ಘಟನೆ ರಾಮನಗರದ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ನಡೆದಿದೆ. ಗುರುಲಿಂಗಪ್ಪ(32)‌ ಮೃತ ಪೊಲೀಸ್​ ಕಾನ್​​ಸ್ಟೇಬಲ್.

ಇದನ್ನೂ ಓದಿ: ಮದ್ವೆಯಾಗುವಂತೆ ಮಾವನ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯಕಂಡ ಅಪ್ರಾಪ್ತೆ

ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಗುರುಲಿಂಗಪ್ಪ, ಚನ್ನಪಟ್ಟಣ ಉಪ ಚುನಾವಣೆ ಬಂದೋಬಸ್ತ್​ನಿಂದ ರಾತ್ರಿ ಮನೆಗೆ ವಾಪಾಸ್ ಆಗಿದ್ದರು. ಆದರೆ ವಿಧಿಯಾಟ ಬೆಳಗಾಗುವುದರಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಡಿವೈ ಎಸ್​ಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ