ಕೋಲ್ಕತ್ತಾ: ಮಹಿಳೆಯ ಕೊಲೆ, ಖಾಲಿ ಕ್ವಾರ್ಟರ್ಸ್​ನಲ್ಲಿ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ

ಕೋಲ್ಕತ್ತಾದಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದೆ, ಮೂರು ಪ್ಲಾಸ್ಟಿಕ್ ಚೀಲಗಳಲ್ಲಿ ಆಕೆಯ ದೇಹದ ಭಾಗಗಳು ಪತ್ತೆಯಾಗಿವೆ, ಇದುವರೆಗೂ ಮಹಿಳೆಯ ಗುರುತು ಪತ್ತೆಯಾಗಿಲ್ಲ, ದೇಹದ ಇನ್ನೂ ಕೆಲವು ಭಾಗಗಳು ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾ: ಮಹಿಳೆಯ ಕೊಲೆ, ಖಾಲಿ ಕ್ವಾರ್ಟರ್ಸ್​ನಲ್ಲಿ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ
ಸಾವು
Follow us
ನಯನಾ ರಾಜೀವ್
|

Updated on: Apr 03, 2024 | 10:34 AM

ಕೋಲ್ಕತ್ತಾದ ವಾಟ್​ಗಂಜ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿರುವ ಸಿಐಎಸ್​ಎಫ್​ ಖಾಲಿ ಕ್ವಾರ್ಟರ್ಸ್​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ ಬಳಿಕ ಮೂರು ಕಪ್ಪು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಲಾಗಿದ್ದ ಮಹಿಳೆಯ ಕತ್ತರಿಸಿದ ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹಿಳೆಯನ್ನು ಆ ರೀತಿ ಭಯಾನಕವಾಗಿ ಹತ್ಯೆ ಮಾಡಿರುವ ವ್ಯಕ್ತಿಯನ್ನು ಪತ್ತೆಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮಹಿಳೆ 30-35 ವರ್ಷ ಆಸುಪಾಸಿನವರು ಎನ್ನಲಾಗಿದೆ, ಮಂಗಳವಾರ ತಡರಾತ್ರಿವರೆಗೂ ಪೊಲೀಸರು ಆಕೆಯ ಗುರುತು ಪತ್ತೆ ಹೆಚ್ಚುವ ಪ್ರಯತ್ನ ಮಾಡಿದ್ದಾರೆ ಆದರೆ ಇದುವರೆಗೂ ತಿಳಿದುಬಂದಿಲ್ಲ. ಆಕೆಯನ್ನು ಅದೇ ಪ್ರದೇಶದಲ್ಲಿ ಕೊಲೆ ಮಾಡಲಾಗಿದೆಯೇ ಅಥವಾ ಬೇರೆಡೆಗೆ ಕೊಲೆ ಮಾಡಿ ಅಲ್ಲಿ ತಂದು ಎಸೆಯಲಾಗಿದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.

ಆಕೆಯ ಹಣೆ ಮೇಲೆ ಸಿಂಧೂರವಿದ್ದ ಕಾರಣ ಮದುವೆಯಾಗಿರಬಹುದು ಎಂದು ಅಂದಾಜಿಸಿದ್ದಾರೆ.ಚೀಲದೊಳಗೆ ಇಟ್ಟಿಗೆಯೂ ಇತ್ತು, ಕೈಗಳು, ಪಾದ ಹಾಗೂ ಹೊಟ್ಟೆಯ ಭಾಗ ಇನ್ನೂ ಪತ್ತೆಯಾಗಿಲ್ಲ. ಚಲಿಸುವ ವಾಹನದಿಂದ ಯಾರೋ ಈ ಚೀಲಗಳನ್ನು ಎಸೆದಿರಬಹುದು ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: ರಾಮನಗರ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ. ಫೆಬ್ರವರಿಯಲ್ಲಿ ಬೆಂಗಳೂರಿನ ಕೆಆರ್ ಪುರಂ ಪ್ರದೇಶದಲ್ಲಿ 65 ವರ್ಷದ ಮಹಿಳೆಯ ಛಿದ್ರಗೊಂಡ ಶವ ಡ್ರಮ್‌ನಲ್ಲಿ ಪತ್ತೆಯಾಗಿತ್ತು.

ಮೃತರನ್ನು – ಸುಶೀಲಮ್ಮ ಎಂದು ಗುರುತಿಸಲಾಗಿದೆ – ಮತ್ತು ಅವರ ಮಗಳು ಕೆಆರ್ ಪುರಂನ ನೆರೆಯ ಪ್ರದೇಶವಾದ ನಿಸರ್ಗ ಲೇಔಟ್‌ನಲ್ಲಿ ಬಾಡಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಸ್ಥಳದಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದ ಬಳಿಕ ಪೊಲೀಸರು ಶವ ಪತ್ತೆ ಮಾಡಿದ್ದರು.

ಕಳೆದ ವರ್ಷ, ಇಂತಹ ಹಲವಾರು ಘೋರ ಮತ್ತು ಭಯಾನಕ ಕೊಲೆಯ ಘಟನೆಗಳು ಬೆಳಕಿಗೆ ಬಂದವು. ಅವುಗಳಲ್ಲಿ ಮುಂಬೈನ ಮೀರಾ ರೋಡ್ ಕೊಲೆ ಅತ್ಯಂತ ಭಯಾನಕ ಪ್ರಕರಣಗಳಲ್ಲಿ ಒಂದಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಮೀರಾ ರೋಡ್‌ನಲ್ಲಿ 36 ವರ್ಷದ ಮಹಿಳೆಯನ್ನು ಆಕೆಯ ಲಿವ್-ಇನ್ ಪಾರ್ಟ್ನರ್​ ಕೊಂದು ಹಲವು ತುಂಡುಗಳಾಗಿ ಕತ್ತರಿಸಿ ಎಸೆದಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ