ರಾಯಚೂರು: ಯರಮರಸ್ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ನಡೆದಿದೆ. ರಾಮನಗರ ಜಿಲ್ಲೆಯಲ್ಲಿ ರೌಡಿಶೀಟರ್​ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಅದೇ ರೀತಿ, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಯಚೂರು: ಯರಮರಸ್ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
Edited By: Rakesh Nayak Manchi

Updated on: Oct 15, 2023 | 10:55 AM

ರಾಯಚೂರು, ಅ.15: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಹಾಗೂ ಎಫ್​ಎಸ್​ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಕೊಲೆ

ರಾಮನಗರ: ಮಚ್ಚಿನಿಂದ ಕೊಚ್ಚಿ ರೌಡಿಶೀಟರ್​ನನ್ನು ಕೊಲೆ ಮಾಡಿದ ಘಟನೆ ರಾಮನಗರ ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲೋಕೇಶ್ (34)​ ಹತ್ಯೆಯಾದ ರೌಡಿಶೀಟರ್. ರಾಮನಗರ ಗ್ರಾಮಾಂತರ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಸ್ಥಳಕ್ಕೆ ಎಸ್​ಪಿ ಕಾರ್ತಿಕ್ ರೆಡ್ಡಿ, ಎಎಸ್‌ಪಿ ಸುರೇಶ್ ಭೇಟಿನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಸಂಪಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಕೀಲ್ ಅಖ್ತರ್ (28) ಕೊಲೆಯಾದ ಯುವಕ. ಕೋಗಿಲು ಲೇಔಟ್​ನಲ್ಲಿ ಶಕೀಲ್​ನನ್ನು ಕೊಲೆ ಮಾಡಿ ಸೈಟ್​ನ ಪಿಟ್ ಗುಂಡಿಗೆ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 am, Sun, 15 October 23

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us