ವರದಕ್ಷಿಣೆ ಕಿರುಕುಳ ಆರೋಪ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

|

Updated on: Jan 31, 2021 | 8:44 AM

ಮೃತ ದುರ್ದೈವಿ ಉಷಾ ಪೋಷಕರು, ರಂಜಿತ್ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ವರದಕ್ಷಿಣೆ ಕಿರುಕುಳ ಆರೋಪ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ಪತಿ ರಂಜಿತ್ ಮತ್ತು ಪತ್ನಿ ಉಷಾ
Follow us on

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಪತಿ ರಂಜಿತ್ ಮನೆಯಲ್ಲಿ ಉಷಾ ಮೃತದೇಹ ಪತ್ತೆಯಾಗಿದೆ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

2015ರಲ್ಲಿ ರಂಜಿತ್ ಜತೆ ಉಷಾ ಮದುವೆಯಾಗಿತ್ತು. ಇದೀಗ, ಉಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ದುರ್ದೈವಿ ಉಷಾ ಪೋಷಕರು, ರಂಜಿತ್ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ವರ್ತೂರು ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್( 304B) ಮತ್ತು (498a) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ