AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Talaghattapura: 19ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

19ನೇ ಮಹಡಿಯಿಂದ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ತಲಘಟ್ಟಪುರದಲ್ಲಿರುವ ಪುರ್ವ ಹೈಲ್ಯಾಂಡ್ ಅಪಾರ್ಟ್​ಮೆಂಟ್​​​ನಲ್ಲಿ ನಡೆದಿದೆ.

Talaghattapura: 19ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 25, 2022 | 7:16 PM

Share

ಬೆಂಗಳೂರು: 19ನೇ ಮಹಡಿಯಿಂದ ಬಿದ್ದು ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಹೊರವಲಯದ ತಲಘಟ್ಟಪುರದಲ್ಲಿರುವ ಪುರ್ವ ಹೈಲ್ಯಾಂಡ್ ಅಪಾರ್ಟ್​ಮೆಂಟ್​​​ನಲ್ಲಿ ನಡೆದಿದೆ. ಚರಿಸ್ಮಾ ಸಿಂಗ್ (40) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಚರೀಷ್ಮಾ ಸಿಂಗ್​ ದಂಪತಿ ಮೂಲತಃ ತಮಿಳುನಾಡಿನವರು. ಸುಮಾರು 15 ವರ್ಷಗಳ ಕಾಲ ಕೆನಡಾದಲ್ಲಿದ್ದ ಚರೀಷ್ಮಾ ದಂಪತಿ. ಮದುವೆಯಾಗಿ 10 ವರ್ಷ ಕಳೆದರೂ ದಂಪತಿಗೆ ಮಕ್ಕಳಾಗಿರಲಿಲ್ಲ. 2022ರ ಜನವರಿಯಲ್ಲಿ ಮಗುವಿಗೆ ಜನ್ಮ ನೀಡಿದ್ದರು.​ ಆದರೆ ಮಗುವಿಗೆ ಉಣಿಸಲು ಎದೆ ಹಾಲು ಬಾರದಿದ್ದರಿಂದ ಮಾನಸಿಕ ಖಿನ್ನತೆಗೆ ಚರೀಷ್ಮಾ ಸಿಂಗ್ ಒಳಗಾಗಿದ್ದರು ಎನ್ನಲಾಗುತ್ತಿದೆ. ಈ ಹಿಂದೆ ಕೂಡ ಅಕ್ಟೋಬರ್​ನಲ್ಲಿ ಚರೀಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದರು. ಇಂದು (ಡಿ. 25) ಮಧ್ಯಾಹ್ನ 1 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದರು. ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೈಕ್​​ಗೆ ಟಿಪ್ಪರ್ ಡಿಕ್ಕಿ: ಇಬ್ಬರು ಸಾವು

ರಾಯಚೂರು: ಬೈಕ್​​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಸಲಮರಿ ಕ್ಯಾಂಪ್ ಬಳಿ ನಡೆದಿದೆ.  ಮುದಿಯಪ್ಪ( 45), ಹುಲಿಗೆಪ್ಪ (64) ಮೃತರು. ಮೃತರಿಬ್ಬರು ಇದೇ ಸಾಸಲಮರಿ ಗ್ರಾಮದ ನಿವಾಸಿಗಳು. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಕ್ರಕ್ಕೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು: ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರ ಸಾವಪ್ಪಿರುವಂತಹ ಘಟನೆ ನಗರದ ಗೋಪಾಲಗೌಡ ಜಂಕ್ಷನ್ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಅಲೆಕ್ಸ್(25) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಿಂಬದಿ ಕುಳಿತಿದ್ದ ಸತೀಶ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕ್ರಿಸ್​​ಮಸ್​ ಹಿನ್ನೆಲೆ ಚರ್ಚ್​​ಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎನ್ನಲಾಗುತ್ತಿದೆ. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪೆನ್ ಡ್ರೈವ್​ನಲ್ಲಿದ್ದ ಯುವತಿಯ ಖಾಸಗಿ ಫೋಟೋ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್, ಪೆನ್ ಡ್ರೈವ್​ ಕಳೆದುಕೊಂಡಿದ್ದಾಕೆಗೆ ಇದೆಂಥಾ ಫಜೀತಿ

ಮಹಿಳೆಯನ್ನು ಬರ್ಬರ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಹಾಸನ: ಕತ್ತು ಸೀಳಿ ಮಹಿಳೆಯ ಬರ್ಬರ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ(58) ಹತ್ಯೆಯಾದ ಮಹಿಳೆ. ಇಂದು(ಡಿ. 24) ಬೆಳಿಗ್ಗೆ ಹತ್ತು ಗಂಟೆ ಸಮಯದಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ವತಮ್ಮ ಪತಿ ರಾಜೇಗೌಡ ಹೊರಗೆ ಹೋಗಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಮಾಸ್ಕ್ ಧರಿಸಿ ಇಬ್ಬರು ಬೈಕ್‌ನಲ್ಲಿ ಬಂದು ಕೊಲೆ ಮಾಡಿರುವ ಆರೋಪ ಮಾಡಿದ್ದು, ಗ್ರಾಮಸ್ಥರು ದುಷ್ಕರ್ಮಿಗಳು ಬೈಕ್​ನಲ್ಲಿ ಪರಾರಿಯಾಗುವುದನ್ನು ನೋಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Koppal: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

ಇನ್ಸ್ಟಾಗ್ರಾಂ ಮೂಲಕ‌ ಲವ್ ಜಿಹಾದ್? ಮುಸ್ಲಿಂ ಸಂಪ್ರದಾಯದಂತೆ ಮದುವೆದ ಹಿಂದೂ ಯುವತಿ

ಕೊಪ್ಪಳ: ಇಂದಿನ ಸಾಮಾಜಿಕ ಜಾಲತಾಣ ಜಮಾನಾಗೆ ತಕ್ಕಂತೆ ಇನ್ಸ್ಟಾಗ್ರಾಂ ಮೂಲಕ‌ ನಡೆಯಿತಾ ಲವ್ ಜಿಹಾದ್ ಎಂಬ ಶಂಕೆ ವ್ಯಕ್ತವಾಗಿದೆ. ಇನ್ಸ್ಟಾಗ್ರಾಂನಲ್ಲಿ ಹಿಂದೂ ಯುವತಿ ಮುಸ್ಲಿಂ ಯುವಕ ನಡುವೆ ಪ್ರೀತಿ ಮೊಳಕೆಯೊಡೆದಿದೆ . ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಈ ಇನ್ಸ್​ಟೆಂಟ್​​ ಇನ್ಸ್ಟಾಗ್ರಾಂ ಲವ್ ಪ್ರಕರಣ ವರದಿಯಾಗಿದೆ. ಹೈದ್ರಾಬಾದ್ ಮೂಲದ ಯುವಕ ಶೇಕ್ ವಹಿದ್ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಇಂದಿರಾನಗರದ ಯುವತಿ ಮದುವೆಯಾದ ಜೋಡಿ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:33 pm, Sun, 25 December 22

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು