ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ

ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಗ್ರಾಮದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಯಾದಗಿರಿ ಮೂಲದ ಮೂವರು ಸೇರಿದಂತೆ ಐವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಮಕ್ತಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ
ಪ್ರಾತಿನಿಧಿಕ ಚಿತ್ರ
Edited By:

Updated on: Dec 24, 2023 | 8:18 PM

ಯಾದಗಿರಿ, ಡಿಸೆಂಬರ್​ 24: ಎರಡು ಕಾರುಗಳ ನಡುವೆ ಡಿಕ್ಕಿ (accident) ಹೊಡೆದ ಪರಿಣಾಮ ಯಾದಗಿರಿ ಮೂಲದ ಮೂವರು ಸೇರಿದಂತೆ ಐವರು ದುರ್ಮರಣ ಹೊಂದಿರುವಂತಹ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಸೈದಾಪುರದ ಮೌಲಾಲಿ, ಖಲೀಲ್, ಬಸಮ್ಮ ಮತ್ತು ಮಹಾರಾಷ್ಟ್ರ ಮೂಲದ ತಾಯಿ ಪ್ರಬೀತಾ(35), ಪುತ್ರಿ ಅಸ್ಮಿತಾ(7) ಮೃತರು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಮಕ್ತಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಪಘಾತದಲ್ಲಿ ಐವರು ಮೃತಪಟ್ಟಿರುವುದಾಗಿ ನಾರಾಯಣಪೇಟೆ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಗೌತಮ್​ ಖಚಿತಪಡಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

ಅಪಘಾತದ ನಂತರ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು,  ಜಖಂಗೊಂಡಿದ್ದ ಕಾರುಗಳನ್ನು ಪೊಲೀಸರು ರಸ್ತೆ ಬದಿಗೆ ಸ್ಥಳಾಂತರ ಮಾಡಿ ಸಂಚಾರ ಸುಗಮಗೊಳಿಸಲು ಹರಸಾಹಸ ಪಟ್ಟಿದ್ದಾರೆ.

ಅಪಘಾತದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನೆ ಬಗ್ಗೆ ನಿಖರವಾದ ಕಾರಣವನ್ನು ತಿಳಿಯಲು, ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 pm, Sun, 24 December 23