Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷದಿಂದಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ರೌಡಿಶೀಟರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ
ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on: Mar 23, 2025 | 4:47 PM

ಯಾದಗಿರಿ, ಮಾರ್ಚ್​ 23: ಇತ್ತೀಚೆಗೆ ಜಿಲ್ಲೆಯ ಶಹಾಪುರ (Shahapur) ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ ಹಾಗೂ ಆತನ ಸಹಚರನನ್ನು ಹತ್ಯೆ (kill) ಮಾಡಲಾಗಿತ್ತು. 11 ವರ್ಷಗಳ ಹಿಂದೆ ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಇದೀಗ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸದ್ಯ ಮೂವರು ಕೊಲೆ ಆರೋಪಿಗಳಾದ ಶಿವಪ್ಪಗೌಡ, ಹುಸೇನಿ, ಮೊಹಮ್ಮದ್ ರಿಯಾಜ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 16 ರಂದು ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಕ್ರಾಸ್ ಬಳಿ ಡಬಲ್ ಮರ್ಡರ್ ನಡೆದಿತ್ತು.  ಕಟಿಂಗ್ ಮಾಡಿಸಿಕೊಂಡು ಹೋಗ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ನಿಂದ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ಯಾದಗಿರಿಯಲ್ಲಿ ಡಬಲ್​ ಮರ್ಡರ್​: 2 ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ, ಸಹಚರನ ಕೊಲೆ

ಇದನ್ನೂ ಓದಿ
Image
ಯಾದಗಿರಿ: 2 ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ, ಸಹಚರನ ಕೊಲೆ
Image
ಹೆಚ್ಚಿದ ಫೇಕ್ ನ್ಯೂಸ್ ಹಾವಳಿ: ಬೆಂಗಳೂರು, ಉತ್ತರ ಕನ್ನಡ ಮುಂಚೂಣಿಯಲ್ಲಿ
Image
ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್
Image
ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಇನ್ನು ಬಂಧಿತ ಆರೋಪಿ ಅರಳಹಳ್ಳಿಯ ನಿವಾಸಿ ಶಿವಪ್ಪಗೌಡ 11 ವರ್ಷಗಳ ಹಿಂದೆ ಅನೈತಿಕ ಸಂಬಂಧದಲ್ಲಿ ದಲಿತ ಮುಖಂಡ ಮಾಪಣ್ಣನ ಕಣ್ಣಿಗೆ ಸಿಕ್ಕಿಬಿದ್ದಿದ್ದ. ಆಗ ನ್ಯಾಯ ಪಂಚಾಯ್ತಿ ಮಾಡಲಾಗಿತ್ತು. ಇದೇ ವಿಚಾರಕ್ಕೆ ಮಾಪಣ್ಣ ಮತ್ತು ಶಿವಪ್ಪಗೌಡ ನಡುವೆ ದ್ವೇಷ ಬೆಳೆದಿತ್ತು. ಹಾಗಾಗಿ 2014ರಲ್ಲಿ ಮಾಪಣ್ಣ ಕೊಲೆಗೆ ರೌಡಿಶೀಟರ್ ಹುಸೇನಿಗೆ ಶಿವಪ್ಪಗೌಡ ಸುಪಾರಿ ಕೊಟ್ಟಿದ್ದ.

2014ರಲ್ಲಿ ಭೀಮರಾಯನಗುಡಿ ಬಳಿ ಮಾಪಣ್ಣನ ರೌಡಿಶೀಟರ್ ಹುಸೇನಿ ಗ್ಯಾಂಗ್​ ಗುಂಡಿನ ದಾಳಿ ಮಾಡಿತ್ತು. ಆಗ ಮಾಪಣ್ಣ ಜಸ್ಟ್ ಮಿಸ್ ಆಗಿ ಬದುಕುಳಿದಿದ್ದ. ಇದಾದ ಬಳಿಕ 3 ಬಾರಿ ಮಾಪ್ಪಣ್ಣನ ಮೇಲೆ ಗ್ಯಾಂಗ್ ದಾಳಿ ಮಾಡಿತ್ತು. 2019ರಲ್ಲಿ ಮಾಪಣ್ಣ ಗ್ಯಾಂಗ್ ಹುಸೇನಿಯ ಮೇಲೆ ಹಲ್ಲೆ ಮಾಡಿತ್ತು. ಇದರಿಂದಾಗಿ ಮಾಪಣ್ಣ ಹಾಗೂ ಹುಸೇನಿ ನಡುವೆ ದ್ವೇಷ ಬೆಳೆದಿತ್ತು.

ಇದನ್ನೂ ಓದಿ: ಯಾದಗಿರಿ: ಮದುವೆಯ ಆಸೆ ತೋರಿಸಿ ವಿಧವೆಯ ಜೊತೆ ಲವ್, ದೈಹಿಕ ಸಂಬಂಧ, ಲಕ್ಷಾಂತರ ರೂ. ವಂಚನೆ

ಪ್ರತಿ ಭಾನುವಾರ ಮಾಪಣ್ಣ ಭೀಮರಾಯನಗುಡಿಗೆ ಬರುತ್ತಿದ್ದ. ಬೈಕ್​ನಲ್ಲಿ ಬರುತ್ತಿದ್ದ ಮಾಪಣ್ಣನನ್ನು ಕಾರಿನಲ್ಲಿ ಬೆನ್ನಟ್ಟಿದ್ದ ಗ್ಯಾಂಗ್, ಸಾದ್ಯಾಪುರ ಕ್ರಾಸ್ ಬಳಿ ಮಾಪಣ್ಣನ ಬೈಕ್​ಗೆ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್​ ಸವಾರರು ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್​ನಲ್ಲಿ ಖಾಸಗಿ ಶಾಲೆಯ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಉದಯ್ ಕುಮಾರ್(22), ಜಾರ್ಖಂಡ್​ ಮೂಲದ ಕಾರ್ಮಿಕ ಪ್ರಕಾಶ್ ಮಾಂಖಿ(25) ಮೃತರು. ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!