AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಸಂಭವಿಸಿದೆ. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ.

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಲಾರಿ-ಬೈಕ್‌ ಅಪಘಾತ
ಅಮೀನ್​ ಸಾಬ್​
| Edited By: |

Updated on: Feb 18, 2024 | 9:24 PM

Share

ಯಾದಗಿರಿ, ಫೆಬ್ರವರಿ 18: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ (died) ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ನಡೆದಿದೆ. ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಕೊಲೆನಾ ಇಲ್ಲಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆಂಬುಲೆನ್ಸ್ ಟೈರ್ ಸ್ಫೋಟಗೊಂಡು ಬೈಕ್​ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು 

ತುಮಕೂರು: ಆಂಬುಲೆನ್ಸ್ ಟೈರ್ ಸಿಡಿದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ಗೇರಹಳ್ಳಿ ಬಳಿ ನಡೆದಿದೆ. ಬೈಕ್ ಸವಾರ ಮಂಜು(38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಲಿಸುತ್ತಿದ್ದ ಆಂಬುಲೆನ್ಸ್​​ ಟೈರ್ ಪಂಕ್ಚರ್ ಆಗಿ ಟೈರ್​ ಹಾರಿದೆ. ಈ ವೇಳೆ ಚಲಿಸುತ್ತಿದ್ದ ಬೈಕ್​ಗೆ ಟೈರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಳಿಕ ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

ಬೈಕ್​ನಲ್ಲಿದ್ದ ಮತ್ತೋರ್ವ ಸವಾರ ರವಿ ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಗ್ರಾಮ ಪಂಚಾಯಿತಿ ಸದಸ್ಯ ಸಾವು

ಗದಗ: ಕಾರ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿವೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ಘಟನೆ ನಡೆದಿದೆ. ದೇವಿಹಾಳ ಗ್ರಾಮ ಪಂಚಾಯತ ಸದಸ್ಯ ಯಲ್ಲಪ್ಪ (48) ಮೃತ ವ್ಯಕ್ತಿ.

ಇದನ್ನೂ ಓದಿ: ಬೆಂಗಳೂರು: ತನ್ನ ತಂಗಿಯ ಎಂಗೇಜ್ಮೆಂಟ್​ಗೆ ಬರ್ಲಿಲ್ಲ ಎಂದು ಪತ್ನಿಗೆ ಚಾಕು ಇರಿದು ಜೈಲು ಸೇರಿದ ಪತಿ

ಬಸವೆಣ್ಣೆಪ್ಪ 50 ಗಂಭೀರ ಗಾಯ ಹುಬ್ಬಳ್ಳಿ ಕಿಮ್ಸ್​ಗೆ ದಾಖಲು ಮಾಡಲಾಗಿದೆ. ಅಪಘಾತದ ಬಳಿಕ ಕಾರು ಚಲಾಯಿಸುತ್ತಿದ್ದ ಮಹಿಳೆ ಪರಾರಿ ಆಗಿದ್ದಾರೆ. ಶಿರಹಟ್ಟಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ