ಯಾದಗಿರಿ, ಫೆಬ್ರವರಿ 18: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ (died) ಹೊಂದಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ನಡೆದಿದೆ. ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಕೊಲೆನಾ ಇಲ್ಲಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತುಮಕೂರು: ಆಂಬುಲೆನ್ಸ್ ಟೈರ್ ಸಿಡಿದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ಗೇರಹಳ್ಳಿ ಬಳಿ ನಡೆದಿದೆ. ಬೈಕ್ ಸವಾರ ಮಂಜು(38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಲಿಸುತ್ತಿದ್ದ ಆಂಬುಲೆನ್ಸ್ ಟೈರ್ ಪಂಕ್ಚರ್ ಆಗಿ ಟೈರ್ ಹಾರಿದೆ. ಈ ವೇಳೆ ಚಲಿಸುತ್ತಿದ್ದ ಬೈಕ್ಗೆ ಟೈರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಳಿಕ ರಸ್ತೆ ಬದಿಯ ಕಲ್ಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ
ಬೈಕ್‌ನಲ್ಲಿದ್ದ ಮತ್ತೋರ್ವ ಸವಾರ ರವಿ ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗದಗ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿವೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ಘಟನೆ ನಡೆದಿದೆ. ದೇವಿಹಾಳ ಗ್ರಾಮ ಪಂಚಾಯತ ಸದಸ್ಯ ಯಲ್ಲಪ್ಪ (48) ಮೃತ ವ್ಯಕ್ತಿ.
ಇದನ್ನೂ ಓದಿ: ಬೆಂಗಳೂರು: ತನ್ನ ತಂಗಿಯ ಎಂಗೇಜ್ಮೆಂಟ್ಗೆ ಬರ್ಲಿಲ್ಲ ಎಂದು ಪತ್ನಿಗೆ ಚಾಕು ಇರಿದು ಜೈಲು ಸೇರಿದ ಪತಿ
ಬಸವೆಣ್ಣೆಪ್ಪ 50 ಗಂಭೀರ ಗಾಯ ಹುಬ್ಬಳ್ಳಿ ಕಿಮ್ಸ್ಗೆ ದಾಖಲು ಮಾಡಲಾಗಿದೆ. ಅಪಘಾತದ ಬಳಿಕ ಕಾರು ಚಲಾಯಿಸುತ್ತಿದ್ದ ಮಹಿಳೆ ಪರಾರಿ ಆಗಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.