ಯಶವಂತಪುರ: ಡ್ರಮ್​ನಲ್ಲಿ ಅಪರಿಚಿತ ಮಹಿಳೆ ಶವಪತ್ತೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 06, 2023 | 9:56 AM

ಯಶವಂತಪುರ ರೈಲ್ವೆ ಸ್ಟೇಷನ್​ನಲ್ಲಿ ಅಪರಿಚಿತ ಮಹಿಳೆಯನ್ನು ವೇಲ್​ನಿಂದ ಕೊಲೆ ಮಾಡಿ ಡ್ರಮ್​ನಲ್ಲಿ ಹಾಕಲಾಗಿದೆ.

ಯಶವಂತಪುರ: ಡ್ರಮ್​ನಲ್ಲಿ ಅಪರಿಚಿತ ಮಹಿಳೆ ಶವಪತ್ತೆ
ಮೃತ ಅಪರಿಚಿತ ಮಹಿಳೆ
Follow us on

ಬೆಂಗಳೂರು: ಯಶವಂತಪುರ ರೈಲ್ವೆ ಸ್ಟೇಷನ್​ನ ಡ್ರಮ್​ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ವೇಲ್​ನಿಂದ ಕುತ್ತಿಗೆ ಬಿಗಿದು ಸಾಯಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಮೃತ ಮಹಿಳೆಯು ಉತ್ತರ ಭಾರತದವರು ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಇದೀಗ ಪೊಲೀಸರು ಎಲ್ಲಾ ಮಿಸ್ಸಿಂಗ್​ ಕಂಪ್ಲೆಂಟ್​ಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾಗಿದ್ದಾರೆ.

ಡಿಸೆಂಬರ್​ 26 ನೇ ತಾರೀಖಿನಿಂದ ರೈಲ್ವೆ ಸ್ಟೇಷನ್​ಲ್ಲಿಯೇ ಶವ ಇದ್ದು, ಸಿಸಿಟಿವಿ ಪರಿಶೀಲನೆ ವೇಳೆ ಡಿ.26 ರಿಂದ ಅ ಡ್ರಮ್ ಅಲ್ಲಿಯೇ ಇದೆ. ಡಿ.24 ಅಥವಾ 25 ರಂದು ಕೊಲೆ ಮಾಡಿ ಡ್ರಮ್​ನಲ್ಲಿ ಶವ ಹಾಕಿಹೋಗಿರಬಹುದೆಂದು ಅಂದಾಜಿಸಲಾಗಿದೆ. ಇನ್ನು ಯಶವಂತಪುರ ರೈಲು ನಿಲ್ದಾಣದಲ್ಲಿ ನೀಲಿ ಡ್ರಮ್​ಗಳಲ್ಲಿ ಹೆಚ್ಚಾಗಿ ಮೀನು ಸಾಗಟ ಮಾಡುತ್ತಿದ್ದು, ಹಾಗಾಗಿ ರೈಲ್ವೇ ಸಿಬ್ಬಂದಿಗಳು ಡ್ರಮ್ ಬಗ್ಗೆ ತಲೆ ಕೆಡಸಿಕೊಂಡಿರಲಿಲ್ಲ.

ದೇವಸ್ಥಾನದ ಧರ್ಮದರ್ಶಿಯಿಂದ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ದೇವಸ್ಥಾನದ ಆಡಳಿತ ಮಂಡಳಿಯಿಂದ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.

ಆದರೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಪೊಲೀಸರ ಎದುರು ಹೇಳಿರೋದೆ ಬೇರೆ, ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರ ಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದಿದ್ದಾರೆ. ಎಷ್ಟೇ ಮನವಿ ಮಾಡಿಕೊಂಡರು ಹೋಗದಿದ್ದಾಗ ಥಳಿಸಿದ್ದೇವೆ ಎಂದಿದ್ದಾರೆ. ಸದ್ಯ ಮಹಿಳೆ ದೂರು ಹಿಂಪಡೆದಿದ್ದಾರೆ.

ಆಯಾ ತಪ್ಪಿ ಗದ್ದೆಗೆ ಉರುಳಿದ ಕೆ.ಎಸ್.ಆರ್.ಟಿ.ಸಿ ಬಸ್

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​ ಗದ್ದೆಗೆ ನುಗ್ಗಿದೆ ಅದೃಷ್ಟವಶಾತ್​ ಯಾವುದೇ ಸಾವುಗಳು ಸಂಭವಿಸಿಲ್ಲ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕಾರ್ಪಿಯೋ ಹಾಗೂ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಹೊರವಲಯದಲ್ಲಿ ಸ್ಕಾರ್ಪಿಯೋ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಇನ್ನು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಪೊಲೀಸ್ ಸಿಬ್ಬಂದಿಗಳ‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ