AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಡ್ರಮ್​ನಲ್ಲಿ ಯುವತಿ ಶವ ಪತ್ತೆ; ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ1 ತಿಂಗಳಲ್ಲಿ 2ನೇ ಮೃತದೇಹ

ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಗೂಡ್ಸ್ ಪ್ಲಾಟ್​ಫಾರ್ಮ್​ನ ಬಾಕ್ಸ್​ವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ 23 ವರ್ಷದ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ.

Bengaluru: ಡ್ರಮ್​ನಲ್ಲಿ ಯುವತಿ ಶವ ಪತ್ತೆ; ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ1 ತಿಂಗಳಲ್ಲಿ 2ನೇ ಮೃತದೇಹ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 04, 2023 | 8:57 PM

Share

ಬೆಂಗಳೂರು: ಬೆಂಗಳೂರಿನ (Bengaluru) ಯಶವಂತಪುರ ರೈಲ್ವೆ ನಿಲ್ದಾಣದ (Yeshwantpur railway station) ಗೂಡ್ಸ್ ಪ್ಲಾಟ್​ಫಾರ್ಮ್​ನ ಬಾಕ್ಸ್​ವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ 23 ವರ್ಷದ ಅಪರಿಚಿತ ಯುವತಿಯ (Young Girl) ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಕವರ್​​ನಲ್ಲಿ ಶವ ಇಟ್ಟು ಸೀಲ್ ಮಾಡಿದ್ದಾರೆ. ಇಂದು (ಜ.4) ವಾಸನೆ ಬಂದ ಹಿನ್ನೆಲೆ ಪರಿಶೀಲಿಸಿದಾಗ ಯುವತಿಯ ಶವ ಇರುವುದು ಗೊತ್ತಾಗಿದೆ. ಯಶವಂತಪುರ ರೈಲ್ವೆ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು ಐದು ದಿನಗಳಿಂದ ರೇಲ್ವೆ ನಿಲ್ದಾಣದಲ್ಲಿರುವ ಶವ

ಕಳೆದ ನಾಲ್ಕೈದು ದಿನಗಳ ಹಿಂದೆ ಶವವನ್ನು ರೇಲ್ವೆ ನಿಲ್ದಾಣದಲ್ಲಿ ತಂದಿಟ್ಟಿರುವ ಶಂಕೆ ವ್ಯಕ್ತವಾಗಿದೆ. ವಾಸನೆ ಬರದಂತೆ ಮೃತದೇಹವನ್ನು ಸೀಲ್ಡ್ ಕವರ್​ನಲ್ಲಿ ಹಾಕಿ, ಬಾಕ್ಸ್ ಮಾಡಿ ಇಡಲಾಗಿದೆ. ಇಂದು ಬೆಳಿಗ್ಗೆ ಕೊಂಚ ಹರಿದ ಕವರ್​ನಿಂದ ವಾಸನೆ ಹೊರಗೆ ಬಂದಿದೆ. ಸಮಯ ಕಳೆದಂತೆ ವಾಸನೆ ಹೆಚ್ಚಾಗಿದೆ. ಆಗ ಸ್ಥಳಿಯರು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದ ವೇಳೆ ಮೃತದೇಹದ ಸಂಗತಿ ಇರುವದು ಬಯಲಾಗಿದೆ. ಯಶವಂತಪುರ ರೈಲ್ವೇ ಪೊಲೀಸರು ಸದ್ಯ ಯುವತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ: ಆಯತಪ್ಪಿ ಕೆಳಕ್ಕೆ ಬಿದ್ದ ಮೂವರು ಕಾರ್ಮಿಕರ ಸ್ಥಿತಿ ಗಂಭೀರ

ಕಳೆದ ಒಂದು ತಿಂಗಳಲ್ಲಿ ಪತ್ತೆಯಾದ ಎರಡನೇ ಮೃತದೇಹ

ಕಳೆದ ಡಿಸೆಂಬರ್ 6/2022 ರಂದುನಗರದ ಬೇರೆ ರೈಲು ನಿಲ್ದಾಣದಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಕಳೆದ ಒಂದು ತಿಂಗಳಲ್ಲಿ ಇದು ಸೇರಿ ಎರಡನೇ ಮೃತದೇಹ ಪತ್ತೆಯಾಗಿದೆ. ಕೆಜಿಎಫ್ ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ದೇಹವನ್ನು ಬೆಡ್ ಶೀಟ್, ಬಟ್ಟೆಗಳ ನಡುವೆ ತುರುಕಲಾಗಿತ್ತು. ಮಹಿಳೆಯ ಯಾವುದೇ ಗುರುತುಗಳು ಪತ್ತೆಯಾಗಿರಲಿಲ್ಲ. ರೈಲು ಖಾಲಿ ಅಗಿದ್ದರು ಚೀಲವನ್ನು ಯಾರು ತೆಗೆದುಕೊಳ್ಳದೆ ಇದ್ದಾಗ ಅನುಮಾನ ವ್ಯಕ್ತವಾಗಿತ್ತು.

ಅನುಮಾನ ಬಂದು ಸಿಬ್ಬಂದಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪರಿಶೀಲನೆ ಮಾಡಿದಾಗ ಮೃತ ದೇಹ ಪತ್ತೆಯಾಗಿತ್ತು. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎರಡು ಪ್ರಕರಣಕ್ಕೆ ಸಾಮ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ

ಹುಬ್ಬಳ್ಳಿಯ ಲಾಡ್ಜ್​ನಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು

ಧಾರವಾಡ: ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿರುವ ಸಂಗಮ ಲಾಡ್ಜ್​ನಲ್ಲಿ ಬೆಡ್​ ಮೇಲೆ ಕುಳಿತು ನೇಣುಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಕಲಘಟಗಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದ ಸಂತೋಷ್ ಹರಿಜನ ಮೃತ ಯುವಕ. ಸಂತೋಷ್​ ಶವ ಪತ್ತೆಯಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:57 pm, Wed, 4 January 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​