ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

|

Updated on: Jun 04, 2023 | 10:17 PM

ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ.

ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು
ಮೃತ ಚೇತನ್​
Follow us on

ಹಾಸನ: ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ (Teen Boy) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ. ಚೇತನ್ (24) ಮೃತ ಯುವಕ. ಚೇತನ್ ಬೇಲೂರು ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ನಿನ್ನೆ (ಜೂ.03) ರಾತ್ರಿ ಮೊಬೈಲ್ ಅಂಗಡಿ (Moblie Shop) ಎದುರು ಬೈಕ್ ನಿಲ್ಲಿಸಿ ಸ್ನೇಹಿತರಾದ ಗೌತಮ್, ದರ್ಶನ್, ಮಿಥುನ್ ಜೊತೆ ಪಾರ್ಟಿಗೆ ತೆರಳಿದ್ದನು. ಪಾರ್ಟಿ ಮುಗಿದ ನಂತರ ದರ್ಶನ್, ಮಿಥುನ್, ಗೌತಮ್ ತಮ್ಮ ತಮ್ಮ ಮನೆಗೆ ತೆರಳಿದ್ದರು. ಆದರೆ ಇಂದು (ಜೂ.04) ಬೆಳಿಗ್ಗೆ ಚೇತನ್ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ.

ಇನ್ನು ಮೃತ ಚೇತನ್​​ನನ್ನು ಗೆಳೆಯರೇ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ. ಈ ಹಿನ್ನೆಲ ಜೊತೆಗೆ ತೆರಳಿದ್ದ ಗೆಳೆಯರನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್ಪಿ ಹರಿರಾಮ್ ಶಂಕರ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿ ಕೊಲೆ; ಕಾರಣ ಇಲ್ಲಿದೆ ನೋಡಿ

ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರುಣ್​ಗೆ ಚಾಕು ಇರಿದು ಕಬಾಬ್ ಮೂರ್ತಿ ಎಂಬಾತ ಪರಾರಿಯಾಗಿದ್ದ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿತ್ತು.

ಘಟನೆ ಹಿನ್ನಲೆ

ಶನಿವಾರ ರಾತ್ರಿ ಕಾಂಗ್ರೆಸ್​ ಶಾಸಕ ಶ್ರೀನಿವಾಸ್​ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಸಮಾರಂಭದಲ್ಲಿ ಆರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್​ಗೆ ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವೇಳೆ ಮಂಜು ಹಾಗೂ ಸಂಜು ಎಂಬಿಬ್ಬರ ಕೈ ಹಾಗೂ ಕಾಲಿಗೆ ಗಾಯಗಳಾಗಿದೆ. ಬಳಿಕ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Sun, 4 June 23