Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

ಪ್ರಿಯಕರನಿಂದ ಪ್ರಿಯತಮೆ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಜೀವನ್ ​ಭೀಮಾ ನಗರದ ಕೋಡಿಹಳ್ಳಿಯಲ್ಲಿ ನಡೆದಿದೆ.

Bengaluru News: ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ
ಜೀವನ್ ಭೀಮಾನಗರ ಪೊಲೀಸ್​ ಠಾಣೆ
Follow us
ವಿವೇಕ ಬಿರಾದಾರ
|

Updated on: Jun 06, 2023 | 10:03 AM

ಬೆಂಗಳೂರು: ಪ್ರಿಯಕರನಿಂದಲೇ (Beloved) ಪ್ರಿಯತಮೆ ಹತ್ಯೆಯಾಗಿರುವ ಘಟನೆ ಬೆಂಗಳೂರಿನ (Bengaluru) ಜೀವನ್ ಭೀಮಾನಗರದ ಕೋಡಿಹಳ್ಳಿಯಲ್ಲಿ ನಡೆದಿದೆ. ಪ್ರಿಯಕರ ಅರ್ಪಿತ್ ಕೊಲೆ (Murder) ಆರೋಪಿ. ಆಕಾಂಕ್ಷಾ ಮೃತ ದುರ್ದೈವಿ. ನಿನ್ನೆ (ಜೂ.05) ರಂದು ಘಟನೆ ನಡೆದಿದೆ. ಜೀವನ್ ಭೀಮಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈದರಾಬಾದ್​ ಮೂಲದ ಆಕಾಂಕ್ಷಾ ಮತ್ತು ದೆಹಲಿ ಮೂಲದ ಅರ್ಪಿತ್ ಈ ಹಿಂದೆ ಒಂದೇ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲೇ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿ, ಒಟ್ಟಿಗೆ ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಇತ್ತೀಚಿಗೆ ಕೆಲಸ ಬದಲಾವಣೆ ಮಾಡಿ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದರು.

ಆದರೆ ಇಬ್ಬರ ನಡುವೆ ಕಳೆದ ಕೆಲ ದಿನಗಳಿಂದ ಜಗಳವಾಗುತ್ತಿತ್ತು. ಈ ಹಿನ್ನಲೆ ಇಬ್ಬರು ಬೇರೆಯಾಗಬೇಕು ಎಂದು ಮಾತಾಡಿಕೊಂಡಿದ್ದರು. ನಿನ್ನೆ ಕೂಡ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿದ್ದು ಅರ್ಪಿತ್,​ ಆಕಾಂಕ್ಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್​ಗೆ ಕಟ್ಟಲು ಯತ್ನಿಸಿದ್ದಾನೆ. ಆದರೆ ಸಾಧ್ಯವಾಗದೆ ನೆಲದ ಮೇಲೆ ಬಿಟ್ಟು ಪರಾರಿಯಾಗಿದ್ದಾನೆ. ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ ಬಿಂಬಿಸಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಕೊಲೆ

ರಾತ್ರಿ ಮತ್ತೊರ್ವ ರೂಮೆಂಟ್ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೊದಲು ಅನುಮಾನಾಸ್ಪದ ಸಾವು ಎಂದು ಅಂದುಕೊಂಡಿದ್ದರು. ಆದರೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ತಿಳಿದುಬಂದಿದೆ. ಇನ್ನು ಆರೋಪಿ ಅರ್ಪಿತ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ