ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ

ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಅಪಹರಣ, ಬೆತ್ತಲೆ ಮಾಡಿ ಹಲ್ಲೆ
ಹುಬ್ಬಳ್ಳಿಗೆ ನಾನೇ ಡಾನ್ ಎಂದು ರೀಲ್ಸ್ ಮಾಡುತ್ತಿದ್ದ ಯುವಕನ ಮೇಲೆ ಪುಡಿರೌಡಿಗಳಿಂದ ಹಲ್ಲೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on:Jul 11, 2023 | 4:46 PM

ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಗೆ ನಾನೇ ಡಾನ್ ಎಂದು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ (Instagram Reels) ಮಾಡಿ ಎದುರಾಳಿ ಗ್ಯಾಂಗ್​ಗೆ ಸಂದೇಶ ರವಾನೆ ಮಾಡುತ್ತಿದ್ದ ಯುವಕನನ್ನು ಪುಡಿರೌಡಿಗಳು ಅಪಹರಿಸಿ ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ (Assault) ನಡೆಸಿದ ಘಟನೆ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಈತ ರೀಲ್ಸ್ ಮಾಡುವಾಗ ಪ್ರಜ್ವಲ್ ಎಂಬಾತನ ತಾಯಿಗೆ ಅತ್ಯಂತ ಕೆಟ್ಟದಾಗಿ ಬೈದಿದ್ದನಂತೆ. ಇದರಿಂದ ಸಿಟ್ಟೆಗೆದ್ದ ಪ್ರಜ್ವಲ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂದೀಪ್​ನನ್ನು ಗಬ್ಬೂರನಿಂದ ಅಪಹರಿಸಿ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು, ಎರಡು ವಿಡಿಯೋ ಮೂಲಕ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆರೋಪಿ ಪ್ರಜ್ವಲ್ ತಾಯಿಗೆ ರೀಲ್ಸ್ ಮೂಲಕ ಸಂದೀಪ್ ಬೈದಿದ್ದ. ಇನ್​ಸ್ಟಾಗ್ರಾಂ ರೀಲ್ಸ್​ನಲ್ಲಿ ಅತ್ಯಂತ ಕೆಟ್ಟದಾಗಿ ಬೈತಿದ್ದನು. ಮೂರ್ನಾಲ್ಕು ತಿಂಗಳ ಹಿಂದಿನ ಘಟನೆ‌ ಇದಾಗಿದ್ದು, ಈವರೆಗೆ ಸಂದೀಪ್ ದೂರು ಕೊಟ್ಟಿಲ್ಲ. ಅಲ್ಲದೆ, ಹುಬ್ಬಳ್ಳಿಯ ಸೆಟ್ಲಮೆಂಟ್​ನಲ್ಲಿ ನಡೆದ ಘಟನೆ ಎಂಬ ಅನುಮಾನ ಇದೆ ಎಂದರು.

ಇದನ್ನೂ ಓದಿ: Mangaluru: ಭೂಮಿ ವಿಚಾರಕ್ಕೆ ಗಲಾಟೆ, ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

ಇಂತಹ ಘಟನೆ ಆಗುವ ಮುಂಚೆ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಎಂಬವರನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಶಹರ ಠಾಣಾ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಮಾಡಿದ್ದ ಸಂದೀಪ್​ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 11 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ