ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ

ವ್ಯಕ್ತಿಯೊಬ್ಬರು ತನ್ನ ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ನಗರದಲ್ಲಿ ನಡೆದಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.

ಧಾರವಾಡ: ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಇರಿದ ತಂದೆ
ತನ್ನ ಪ್ರಿಯತಮೆಯ ತಂದೆಯಿಂದ ಚಾಕು ಇರಿತಕ್ಕೆ ಒಳಗಾದ ಯುವಕ
Edited By: Rakesh Nayak Manchi

Updated on: Jul 16, 2023 | 9:57 PM

ಧಾರವಾಡ, ಜುಲೈ 16: ತನ್ನ ಮಗಳನ್ನು ಪ್ರೀತಿಸಿದ ಯುವಕನಿಗೆ ತಂದೆ ಚಾಕುವಿನಿಂದ ಇರಿದ (Knife stabbing) ಘಟನೆ ಧಾರವಾಡದ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈದಾಪುರ ಬಡಾವಣೆಯಲ್ಲಿ ನಡೆದಿದೆ. ಶಶಾಂಕ್ ಮೂಗನ್ನವರ ಚಾಕು ಇರಿತಕ್ಕೆ ಒಳಗಾದ ಯುವಕ. ಸದ್ಯ ಶಶಾಂಕ್​ನನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಹುಲಗಪ್ಪ ಬಡಿಗೇರ ಎಂಬವರ ಮಗಳನ್ನು ಶಶಾಂಕ್ ಮೂಗನ್ನವರ ಪ್ರೀತಿಸುತ್ತಿದ್ದನು. ಈ ವಿಚಾರ ತಿಳಿದು ಕೋಪಗೊಂಡ ಹುಲಗಪ್ಪ ಬಡಿಗೇರ, ಶಶಾಂಕನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಶಶಾಂಕ್​ಗೆ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ: ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಇದೇ ರೀತಿ, ಪ್ರೀತಿ ವಿಚಾರಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಮನಕಲುಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಸಲಿಗೆ, ಈ ಪ್ರಕರಣದಲ್ಲಿ ಗಾಯಗೊಂಡಿರುವ ಯುವಕ ಪ್ರೀತಿಸುತ್ತಿದ್ದದ್ದ ತನ್ನದೇ ಸಂಬಂಧಿಕರ ಯುವತಿಯನ್ನು. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.

ಇದಾದ ಬಳಿಕ ಮನು ಎಂದಿನಂತೆ ಕಾಲೇಜಿಗೆ ತೆರಳಿದ್ದು, ಆತನ ತಂದೆ ತಂದೆ ರಂಗನಾಥ ನಿನ್ನೆ ಬೆಳಗ್ಗೆ ಡ್ರಾಪ್ ಮಾಡಿದ್ದರು. ಬಳಿಕ ವಾಪಾಸ್ಸಾಗುವ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತಿದ್ದ ಮನುವನ್ನು ಕಿಡ್ನಾಪ್ ಮಾಡಿ ಯುವಕನ ಕೈ ಕಾಲು ಕಟ್ಟಿಹಾಕಿ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us