
ಮೈಸೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಅಣ್ಣನನ್ನೇ ತಮ್ಮ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ H.D.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 53 ವರ್ಷದ ಮಹದೇವೇಗೌಡ ಕೊಲೆಯಾದವರು.
ಮೃತ ಮಹದೇವೇಗೌಡರ ಹೆಸರಿನಲ್ಲಿದ್ದ ಆರು ಎಕರೆ ಜಮೀನು ಉಳುವೆ ವಿಚಾರಕ್ಕೆ ಅಣ್ಣ ತಮ್ಮ ಇಬ್ಬರ ನಡುವೆ ಜಗಳವಾಗಿ ಮಾತಿಗೆ ಮಾತು ಬೆಳೆದು ತಮ್ಮ ಗಂಗಾಧರ ಕುಡುಗೋಲಿಂದ ಅಣ್ಣನ ಎದೆಗೆ ಕೊಚ್ಚಿ ಹತ್ಯೆಗೈದಿದ್ದಾನೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಂಗಾಧರನನ್ನ ಪೊಲೀಸರು ವಶಕ್ಕೆ ಪಡೆದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.