ಸಂಬಂಧಿಗಳ ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಯುವಕ ಅರೆಸ್ಟ್- ಸಿಕ್ಕಿದ್ದೆಷ್ಟು ಗೊತ್ತಾ?

ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ತನ್ನ ಕೈಚಳ ತೋರಿಸುತ್ತಿದ್ದ ಆ ಕಳ್ಳ. ಸಂಬಂಧಿಕರು ಯಾರಾದರೂ ಸಾವನ್ನಪ್ಪಿರುವ ವಿಚಾರ ತಿಳಿದು ಆ ಮನೆಗಳ ಬಳಿಗೆ ತೆರಳುತ್ತಿದ್ದ ಆರೋಪಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ.

ಸಂಬಂಧಿಗಳ ಕಲ್ಯಾಣ ಮಂಟಪ, ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಯುವಕ ಅರೆಸ್ಟ್- ಸಿಕ್ಕಿದ್ದೆಷ್ಟು ಗೊತ್ತಾ?
ಕಲ್ಯಾಣ ಮಂಟಪ, ಸಾವಿನ ಮನೆಗಳ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚ್ತಿದ್ದವ ಯುವಕ ಅರೆಸ್ಟ್
Follow us
ಪ್ರಶಾಂತ್​ ಬಿ.
| Updated By: ಸಾಧು ಶ್ರೀನಾಥ್​

Updated on:Jan 26, 2024 | 5:39 PM

ಅವನು ಒಬ್ಬ ಖತರ್ನಾಕ್ ಕಳ್ಳ. ಸಾವಿನ ಮನೆಗಳೇ ಅವನ ಟಾರ್ಗೆಟ್. ಅತ್ತ ಎಲ್ಲರೂ ಅಂತ್ಯಸಂಸ್ಕಾರಕ್ಕೆ ಅಂತಾ ತೆರಳಿದ್ರೆ, ಇತ್ತ ಆತ ಸಾವಿನ ಮನೆಯಲ್ಲಿ ತನ್ನ ಕೈಚಳಕ ತೋರುತ್ತಿದ್ದ. ಎಲ್ಲರೂ ಸಾವಿನ ನೋವಿನಲ್ಲಿ ಇದ್ದರೇ ಆತ ಮಾತ್ರ ಚಿನ್ನಾಭರಣಗಳನ್ನ ಕದ್ದ ಸಂಭ್ರಮದಲ್ಲಿ ಇರುತ್ತಿದ್ದ. ಸಂಬಂಧಿಕರ ಸಾವಿನ ಮನೆಗಳಲ್ಲೇ ಕಳ್ಳತನ ಮಾಡಿ, ಪೊಲೀಸರ ನಿದ್ರೆಗೆಡಿಸಿದ್ದ ಐನಾತಿ ಕಳ್ಳ ಕೊನೆಗೂ ಅಂದರ್ ಆಗಿದ್ದಾನೆ.

ಹೌದು ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳ ಕೊನೆಗೂ ಅಂದರ್ ಆಗಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ವಿವೇಕ್ (23) ಬಂಧಿತ ಖತರ್ನಾಕ್ ಕಳ್ಳ. ಅಂದಹಾಗೆ ಮೈಸೂರಿನಲ್ಲಿ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ವಿವೇಕ್, ಕಳೆದ ಮೂರು ವರ್ಷದಿಂದ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ.

ಅದರಲ್ಲೂ ಸಾವಿನ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ತನ್ನ ಕೈಚಳ ತೋರಿಸುತ್ತಿದ್ದ. ತನ್ನ ಸಂಬಂಧಿಕರು ಯಾರಾದರೂ ಸಾವನ್ನಪ್ಪಿರುವ ವಿಚಾರ ತಿಳಿದು ಆ ಮನೆಗಳ ಬಳಿಗೆ ತೆರಳುತ್ತಿದ್ದ ಆರೋಪಿ, ಅಂತ್ಯಸಂಸ್ಕಾರಕ್ಕೆಂದು ಎಲ್ಲರೂ ಮನೆಯಿಂದ ತೆರಳಿದ ನಂತರ ಈತ ಮಾತ್ರ ಅಲ್ಲಿಯೇ ಇದ್ದು ಎಲ್ಲರೂ ಹೋದ ನಂತರ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ.

ಕೇವಲ ಸಾವಿನ ಮನೆ ಮಾತ್ರವಲ್ಲ, ಕಲ್ಯಾಣ ಮಂಟಪಗಳಲ್ಲೂ ಕೂಡ ಕಳ್ಳತನ ಮಾಡುತ್ತಿದ್ದ. ಇನ್ನು ಸಾವಿನ ಮನೆಯಲ್ಲಿ ಕದ್ದ ಚಿನ್ನಾಭರಣಗಳನ್ನ ಅಡವಿಟ್ಟು ಮೋಜು ಮಸ್ತಿ ಕೂಡ ಮಾಡುತ್ತಿದ್ದ. ಅಂದಹಾಗೆ ಕಳೆದ ಆರು ತಿಂಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಪಾಂಡವಪುರ ತಾಲೂಕಿನ ಹಿರಮರಳ್ಳಿ, ಚಿನಕುರಳಿ, ಆರತಿ ಉಕ್ಕಡ, ಹರವು, ಡಾಮಡಹಳ್ಳಿ ಗ್ರಾಮಗಳು ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಸಾವಿನ ಮನೆಗಳಲ್ಲಿ ಕಳ್ಳತನ ಮಾಡಿದ್ದ.

ಇದು ಪೊಲೀಸರಿಗೂ ಕೂಡ ದೊಡ್ಡ ತಲೆ ನೋವಾಗಿತ್ತು. ಆರೋಪಿಯ ಬಂಧನಕ್ಕೆ ಪೊಲೀಸರು ಕೂಡ ಬಲೆ ಬೀಸಿದ್ರು. ಅದೇ ರೀತಿ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಶಿವಕುಮಾರ್ ಎಂಬುವವರ ಮನೆಯಲ್ಲಿ 135 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದ. ಈ ಪ್ರಕರಣದಲ್ಲಿ ಆರೋಪಿಯನ್ನ ಬಂಧಿಸಿದಾಗ ಹತ್ತು ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತನಿಂದ ಒಟ್ಟು 36 ಲಕ್ಷ ಮೌಲ್ಯದ 521 ಗ್ರಾಂ‌ ಚಿನ್ನಾಭರಣ, ಕ್ಯಾಮರಾ ಮತ್ತು ಲೆನ್ಸ್, ಒಂದು ಬೈಕ್, ಒಂದು ಕಾರು ಜಪ್ತಿ ಮಾಡಿದ್ದಾರೆ. ಒಟ್ಟಾರೆ ಸಾವಿನ ಮನೆಯಲ್ಲಿ ಕಳ್ಳತನ ಮಾಡಿ ಶೋಕಿ ಮಾಡುತ್ತಿದ್ದ ಆಸಾಮಿ ಕೊನೆಗೂ ಅಂದರ್ ಆಗಿದ್ದು, ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಆಗಿದೆ.

Published On - 5:31 pm, Fri, 26 January 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್