ಯುವಕನೊಬ್ಬ ನಾಲೆಡ್ಜ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ನಿತೀಶ್ ಕುಮಾರ್(21) ಮೃತ ಯುವಕ, ಈತ ಬಿಬಿಎ ವಿದ್ಯಾರ್ಥಿಯಾಗಿದ್ದ. ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಿದ್ದಾರೆ, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವಾಗಿ ತಿಳಿಸಿದ್ದಾರೆ.
ನಿಹಾರದ ಬಾಗಲ್ಪುರದ ನಿವಾಸಿಯಾಗಿದ್ದ ನಿತೀಶ್ ಕುಮಾರ್ ನಾಲೆಡ್ಜ್ ಪಾರ್ಕ್ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಸಂಜೆಯ ವೇಳೆ ನಾಲೆಡ್ಜ್ ಪಾರ್ಕ್ನಲ್ಲಿರುವ ಮೆಟ್ರೋ ನಿಲ್ದಾಣ ತಲುಪಿ ರೈಲಿನ ಮುಂದೆ ಜಿಗಿದಿದ್ದಾನೆ.
ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಪೊಲೀಸರು ವಿದ್ಯಾರ್ಥಿಯ ಮೊಬೈಲ್ನ ಕರೆ ವಿವರಗಳು ಮತ್ತು ಇತರೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:44 am, Thu, 12 January 23