AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote: ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಪ್ರಿಯತಮೆ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ, ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಗುಡೂರು ಗ್ರಾಮದಲ್ಲಿ ನಡೆದಿದೆ.

Bagalkote: ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
ಬಾಗಲಕೋಟೆ ಜಿಲ್ಲಾ ಆಸ್ಪತ್ರೆ
ವಿವೇಕ ಬಿರಾದಾರ
|

Updated on:Mar 27, 2023 | 5:00 PM

Share

ಬಾಗಲಕೋಟೆ: ಪ್ರಿಯತಮೆ (Lover) ಮೇಲೆ ಪೆಟ್ರೋಲ್​​ (Petrol) ಸುರಿದು ಬೆಂಕಿ ಹಚ್ಚಿ, ನಂತರ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಹುನಗುಂದ ತಾಲೂಕಿನ ಗುಡೂರು ಗ್ರಾಮದಲ್ಲಿ ನಡೆದಿದೆ. ಪ್ರಿಯತಮೆ ನೇತ್ರಾವತಿ ವಡ್ಡರ್​(21), ಅಫ್ಜಲ್ ಸೊಲ್ಲಾಪುರ (27) ಗಾಯಾಳುಗಳು. ನೇತ್ರಾವತಿ ವಡ್ಡರ ಅವರ ದೇಹ ಶೇ 70 ರಷ್ಟು ಸುಟ್ಟಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಫ್ಜಲ್ ಸೊಲ್ಲಾಪುರ ಅವರನ್ನು ಹುಬ್ಬಳ್ಳಿ ಕಿಮ್ಸ್​ (Hubli Kims) ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಅಫ್ಜಲ್​​

ನೇತ್ರಾವತಿ ವಡ್ಡರ್ ಅವರನ್ನು, ಅಫ್ಜಲ್ ಸೊಲ್ಲಾಪುರ ಪ್ರೀತಿಸುತ್ತಿದ್ದರು. ಇತ್ತೀಚಿಗೆ ನೇತ್ರವಾತಿ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದರಿಂದ ಕ್ರೋದಿತನಾಗಿದ್ದ ಅಫ್ಜಲ್​, ಇಂದು (ಮಾ.27) ನೇತ್ರಾವತಿ ಕೋಳಿ ಫಾರಂಗೆ ತೆರಳುತ್ತಿದ್ದ ವೇಳೆ, ಎಳೆದೊಯ್ದು ಕೃತ್ಯ ಎಸಗಿದ್ದಾನೆ. ಇದನ್ನು ಕಂಡು ಸ್ಥಳಕ್ಕೆ ಧಾವಿಸಿದ ಸ್ಥಳಿಯರು ಇಬ್ಬರನ್ನೂ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನೇತ್ರಾವತಿಯ ದೇಹ ಶೇ 70 ರಷ್ಟು ಸುಟ್ಟಿದೆ. ಘಟನಾ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತಾಯಿಯ ಜೊತೆ ಅನೈತಿಕ ಸಂಬಂಧ ಹೊಂದಿದವನನ್ನು ಬರ್ಬರವಾಗಿ ಕೊಂದ ಮಗ

ಗಂಡು ಮಗು ಆಗಿಲ್ಲ ಎಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರು ಎಂಬಾತ ತನ್ನ ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಶಿವಮ್ಮಗೆ ಎರಡು ಹೆಣ್ಣು ಮಕ್ಕಳಿದ್ದು ಗಂಡು ಮಗು ಬೇಕು ಎಂದು ಕಿರುಕುಳ ನೀಡಲಾಗುತ್ತಿತ್ತು.

ಇದೇ ಕಾರಣಕ್ಕಾಗಿ ಪ್ರತಿ ನಿತ್ಯ ಪತಿ ಮತ್ತು ಕುಟುಂಬಸ್ಥರು ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಹಲವು ಭಾರಿ ನ್ಯಾಯ ಪಂಚಾಯತಿ ಕೂಡ ಆಗಿದೆ. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ಶಿವಮ್ಮ ದೂರು ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು ಮಾವ ರಾಮೇಗೌಡ, ಅತ್ತೆ ಕೆಂಪಮ್ಮ ತಲೆ ಮರೆಸಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Mon, 27 March 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ