ಕರ್ಫ್ಯೂ ಕ್ಯಾನ್ಸಲ್​: ಇಂದು 4 ಸಾವಿರಕ್ಕೂ ಅಧಿಕ KSRTC ಬಸ್ ಸಂಚಾರ

ಬೆಂಗಳೂರು: ರಾಜ್ಯದಲ್ಲಿ ಇಂದು ಕರ್ಫ್ಯೂ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರ ಶುರುವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳತ್ತ ಸಂಚಾರ ಆರಂಭವಾಗಿದ್ದು, 12ನೇ ದಿನವಾದ ಇಂದು 4 ಸಾವಿರಕ್ಕೂ ಅಧಿಕ ಕೆಎಸ್​ಆರ್​ಟಿಸಿ ಬಸ್​ಗಳು ಸಂಚರಿಸಲಿವೆ. ಆದ್ರೆ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಬಸ್ ನಿಲ್ದಾಣಗಳಿಗೆ ಬರ್ತಿದ್ದಾರೆ. ಗಂಗಾವತಿ, ಹರಿಹರ, ಕೊಪ್ಪಳ, ದಾವಣಗೆರೆ, ಧಾರವಾಡ, ಶಿವಮೊಗ್ಗ, ರಾಯಚೂರು, ಹಾಸನ, ಕಾರವಾರ, ಕೋಲಾರ, ಮಂಗಳೂರು, ಮಡಿಕೇರಿ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಗದಗ, ತುಮಕೂರು, ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳಿಗೆ ಪ್ರಯಾಣ ಸ್ಟಾರ್ಟ್ ಆಗಿದ್ದು, ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಕಡ್ಡಾಯವಾಗಿದೆ.

Related Tags:

Related Posts :

Category: