ದಿನಭವಿಷ್ಯ | ಜನವರಿ 14, 2021

ಜನವರಿ 14, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನಭವಿಷ್ಯ.

  • ಡಾ.ಬಸವರಾಜ ಗುರೂಜಿ
  • Published On - 6:37 AM, 14 Jan 2021
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಗುರುವಾರ, ಜನವರಿ 14, 2021. ಶ್ರವಣ ನಕ್ಷತ್ರ, ರಾಹುಕಾಲ: ಮಧ್ಯಾಹ್ನ 1.48ರಿಂದ ಸಂಜೆ 3.11. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6ಕ್ಕೆ.

ತಾ.14-01-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 8

ವೃಷಭ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 6

ಮಿಥುನ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 1

ಕಟಕ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 4

ಸಿಂಹ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 3

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9

ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5

ವೃಶ್ಚಿಕ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವದು. ಶುಭ ಸಂಖ್ಯೆ: 6

ಧನು: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಕರ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 2

ಕುಂಭ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹ ಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3

ಮೀನ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರ ಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ.
ಶುಭ ಸಂಖ್ಯೆ: 7

ಬಸವರಾಜ ಗುರೂಜಿ

(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)