ಕರ್ತವ್ಯ ಲೋಪ: ಜಿಲ್ಲಾ ಪಂಚಾಯತ್​ ಇಇ ಅಮಾನತು

ಧಾರವಾಡ: ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯತ್​ನ ಇಇ ಮನೋಹರ್ ಮಂದೋಲಿಕರ್ ಅವರು ಅಮಾನತಾಗಿದ್ದಾರೆ.

ಈ ಹಿಂದೆ ಬಾಗಲಕೋಟೆ ಜಿಲ್ಲಾ ಪಂಚಾಯತ್​ನಲ್ಲಿ ಇಇ ಆಗಿ ಮನೋಹರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ಮುಧೋಳ ತಾಲೂಕಿನ 7 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಧಾರವಾಡ ಜಿ.ಪಂ. ಸಿಇಒ ಡಾ.ಬಿ.ಸಿ.ಸತೀಶ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Related Tags:

Related Posts :

Category: