ಬೆಂಗಳೂರಿನ ಕೆ.ಆರ್.ಮಾರ್ಕೆಟ್​ನಲ್ಲಿ ಬೆಂಕಿ ಅವಘಡ

ಬೆಂಗಳೂರು: ಕೆ.ಆರ್.ಮಾರ್ಕೆಟ್​ನ ಖಾಸಿಗ ಕಾಂಪ್ಲೆಕ್ಸ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ 4ನೇ ಮಹಡಿಯಲ್ಲಿರುವ ಟ್ರಾನ್ಸ್​ ಪೋರ್ಟ್ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿ ಸ್ಥಳೀಯರಲ್ಲಿ ಭಾರಿ ಅತಂಕ ಸೃಷ್ಟಿಸಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಕಚೇರಿಯಲ್ಲಿ ದಟ್ಟ ಹೊಗೆ ಆವರಿಸಿದೆ.

ಹೀಗಾಗಿ ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಯುಪಿಎಸ್ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Related Posts :

Category:

error: Content is protected !!

This website uses cookies to ensure you get the best experience on our website. Learn more