ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿರಿಯ ವಕೀಲ ದುಷ್ಯಂತ್ ದವೆ

ವಕೀಲರ ಸಂಘದ ಅಧಿಕಾರಾವಧಿ ಮುಕ್ತಾಯವಾಗಿದೆ. ಈಗಾಗಲೇ ವರ್ಚುವಲ್ ಚುನಾವಣೆ ನಡೆಸುವ ಕುರಿತು ಹಲವು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸಮರ್ಪಕವೆನಿಸುತ್ತಿಲ್ಲ. ಹೀಗಾಗಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

  • TV9 Web Team
  • Published On - 19:47 PM, 14 Jan 2021
ಹಿರಿಯ ವಕೀಲ ದುಷ್ಯಂತ್ ದವೆ

ದೆಹಲಿ: ‘ನಾಯಕನಾಗಿ ಮುಂದುವರೆಯದಿರುವಂತೆ ನನ್ನ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ’ ಎಂದು ದೂರಿರುವ
ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್​ನ ಅಧ್ಯಕ್ಷ, ಹಿರಿಯ ವಕೀಲ ದುಷ್ಯಂತ್ ದವೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಕೀಲರ ಸಂಘದ ಅಧಿಕಾರಾವಧಿ ಮುಕ್ತಾಯವಾಗಿದೆ. ಈಗಾಗಲೇ ವರ್ಚುವಲ್ ಚುನಾವಣೆ ನಡೆಸುವ ಕುರಿತು ಹಲವು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸಮರ್ಪಕವೆನಿಸುತ್ತಿಲ್ಲ. ಹೀಗಾಗಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಸಂಘದ ಸದಸ್ಯರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಕೊರೊನಾ ಪಿಡುಗಿನ ಕಾಲದಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ್ದಕ್ಕಾಗಿ ಧನ್ಯವಾದ ವ್ಯಕ್ತಪಡಿಸಿದ್ದಾರೆ. ಜತೆಗೆ, ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ದೊರೆತದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ದುಷ್ಯಂತ್ ದವೆ ಇತ್ತೀಚಿಗೆ ಅರ್ನಬ್ ಗೋಸ್ವಾಮಿ ಪ್ರಕರಣದಲ್ಲಿ ಮತ್ತು ಕೃಷಿ ಕಾಯ್ದೆಗಳಲ್ಲಿ ವಾದ ಮಂಡಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ